ಮಂಗಳೂರು: ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಏಕಾಏಕಿ ಸಿದ್ದಾರ್ಥ್ ನಾಪತ್ತೆಯಾಗಿದ್ದರಿಂದ ನೇತ್ರಾವತಿ ಸೇತುವೆಯ ಬಳಿ ತೀವ್ರ ಆತಂಕ ಎದುರಾಗಿದ್ದು, ಇತ್ತ ಕಂಕನಾಡಿ ಪೊಲೀಸರು ಬಸವರಾಜ್ ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಬಸವರಾಜ್, `ಸಾಹೇಬ್ರು ಇಂಗ್ಲೀಷ್ ನಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ನನಗೆ ಅದು ಅರ್ಥವಾಗಲಿಲ್ಲ’ ಎಂದು ಹೇಳಿದ್ದಾರೆ.
Advertisement
Advertisement
ಸಿದ್ದಾರ್ಥ್ ಅವರು ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಮೊಬೈಲ್ ನಲ್ಲಿ ಮಾತನಾಡಿಕೊಂಡು ಸೇತುವೆಯ ಮೇಲೆ ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವೇಳೆ ಸಿದ್ದಾರ್ಥ್ ಅವರು `ನೀನು ಬರಬೇಡ ಇಲ್ಲೇ ಇರು’ ಎಂದು ಹೇಳಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
ತಮ್ಮ ಡ್ರೈವರ್ ಗೆ ಬರಬೇಡ ಎಂದು ತಿಳಿಸಿ ಹೋದ ಸಿದ್ದಾರ್ಥ್ ಮತ್ತೆ ಬರದೇ ಇದ್ದಾಗ ಆತಂಕಗೊಂಡ ಬಸವರಾಜ್, ಸಿದ್ದಾರ್ಥ್ ಅವರ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಫೆ ಕಾಫಿ ಡೇ ಮಾಲೀಕ, ಎಸ್‍ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ನಾಪತ್ತೆ
Advertisement
ಕೂಡಲೇ ಪೊಲೀಸರು ದೌಡಾಯಿಸಿದ್ದಾರೆ. ಆದರೆ ಒಂದೆ ಕತ್ತಲು ಹಾಗೂ ಇನ್ನೊಂದೆಡೆ ಮಳೆ ಸುರಿಯುತ್ತಿದ್ದರಿಂದ ಹುಡುಕಾಟ ನಡೆಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಸ್ಥಳಕ್ಕೆ ಸಾಕಷ್ಟು ಮಂದಿ ಪೊಲೀಸರು, ಅಗ್ನಿಶಾಮಕ ದಳ, ಹಾಗೂ ಸಾರ್ವಜನಿಕರು ದೌಡಾಯಿಸಿ ಸಿದ್ದಾರ್ಥ್ ಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. 2 ಬೋಟ್ ಗಳಲ್ಲಿ ಈಜು ತಜ್ಞರು ಶೋಧ ಕಾರ್ಯ ಕೈಗೊಂಡಿದ್ದಾರೆ.