ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗುವ ಮೊದಲು ತನ್ನ ಸ್ನೇಹಿತರಿಗೆಲ್ಲಾ ಕರೆ ಮಾಡಿ ನನ್ನನ್ನು ಕ್ಷಮಿಸಿಬಿಡಿ ಎಂದು ಹೇಳಿದ್ದಾರೆ.
ಏಕಾಏಕಿ ಸಿದ್ದಾರ್ಥ್ ನಾಪತ್ತೆಯಾಗಿದ್ದರಿಂದ ಕಂಕನಾಡಿ ಪೊಲೀಸರು ಕಾರಿನ ಡ್ರೈವರ್ ಬಸವರಾಜ್ ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಸಾಹೇಬ್ರು ದಾರಿಯುದ್ಧಕ್ಕೂ ಸ್ನೇಹಿತರಿಗೆಲ್ಲಾ ಕರೆ ಮಾಡಿ ನನ್ನನ್ನು ಕ್ಷಮಿಸಿಬಿಡಿ ಎಂದು ಕೇಳಿಕೊಳ್ಳುತ್ತಿದ್ದರು. ಮಂಗಳೂರು ಸರ್ಕಲ್‍ಗೆ ಹೋಗುವವರೆಗೂ ಸ್ನೇಹಿತರ ಬಳಿ ಕ್ಷಮೆ ಕೇಳಿದ್ದಾರೆ ಎಂದು ವಿವರಿಸಿದ್ದಾರೆ.
Advertisement
Advertisement
ಸೇತುವೆಗೆ ಬಂದ ಬಳಿಕ ಕಾರು ನಿಲ್ಲಿಸಿ ನೀನು ಹೋಗು, ನಾನು ವಾಕಿಂಗ್‍ಗೆ ಹೋಗಬೇಕು ಎಂದು ಹೇಳಿದ್ದರು. ಹೀಗಾಗಿ ನಾನು ಕಾರು ನಿಲ್ಲಿಸಿದ್ದೇನೆ. ಹೀಗೆ ಕಾರಿನಿಂದ ಇಳಿದ ಅವರು ವಾಕ್ ಮಾಡಿದವರು ಮತ್ತೆ ವಾಪಸ್ ಕಾರು ಬಳಿ ಬಂದಿಲ್ಲ ಎಂದು ಬಸವರಾಜ್ ಹೇಳಿದ್ದಾರೆ.
Advertisement
ಅಲ್ಲದೆ ವಿಚಾರಣೆಯ ವೇಳೆ ಬಸವರಾಜ್, `ಸಾಹೇಬ್ರು ಇಂಗ್ಲೀಷ್ ನಲ್ಲಿ ನಾತನಾಡುತ್ತಿದ್ದರು. ಹೀಗಾಗಿ ನನಗೆ ಅದು ಅರ್ಥವಾಗಲಿಲ್ಲ’ ಎಂದು ಹೇಳಿದ್ದಾರೆ.
Advertisement
ಸಿದ್ದಾರ್ಥ್ ಅವರು ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಮೊಬೈಲ್ ನಲ್ಲಿ ಮಾತನಾಡಿಕೊಂಡು ಸೇತುವೆಯ ಮೇಲೆ ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸವರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವೇಳೆ ಸಿದ್ದಾರ್ಥ್ ಅವರು `ನೀನು ಬರಬೇಡ ಇಲ್ಲೇ ಇರು’ ಎಂದು ಹೇಳಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ತಮ್ಮ ಡ್ರೈವರ್ ಗೆ ಬರಬೇಡ ಎಂದು ತಿಳಿಸಿ ಹೋದ ಸಿದ್ದಾರ್ಥ್ ಮತ್ತೆ ಬರದೇ ಇದ್ದಾಗ ಆತಂಕಗೊಂಡ ಬಸವರಾಜ್, ಸಿದ್ದಾರ್ಥ್ ಅವರ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.