ಬೆಳಗಾವಿ: ಹೆಲಿಕಾಪ್ಟರ್ ಪತನದಲ್ಲಿ ಗಾಯಗೊಂಡಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಶೇ.80 ಕ್ಕಿಂತ ಹೆಚ್ವು ಸುಟ್ಟ ಗಾಯಗಳಾಗಿತ್ತು. ವೈದ್ಯರ ಚಿಕಿತ್ಸೆಯ ಹೊರತಾಗಿಯೂ ಅವರು ನಿಧನರಾಗಿದ್ದಾರೆ. ಭಾರತ ಮಾತೆಯ ವೀರ ಯೋಧನನ್ನು ಕಳೆದುಕೊಂಡಿದೆ. ಅವರ ಮರಣದಿಂದ ಭಾರತದ ಸೇನೆ ಮತ್ತು ಜನತೆ ದು:ಖತಪ್ತವಾಗಿದೆ. ಅವರ ಕುಟುಂಬದವರೆಲ್ಲರೂ ಸೈನ್ಯದಲ್ಲಿದ್ದರು ಎಂದು ನೆನೆದರು. ಇದನ್ನೂ ಓದಿ: ದುರ್ಗಾಪೂಜೆಗೆ ಪಾರಂಪರಿಕ ಸ್ಥಾನಮಾನ ಕೊಟ್ಟ UNESCO
Advertisement
ಇತ್ತೀಚಿಗೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ದೇಶವು ಒಬ್ಬ ವೀರ ಯೋಧನನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.
ಓಂ ಶಾಂತಿ pic.twitter.com/cuxwnYyyVb
— Basavaraj S Bommai (@BSBommai) December 15, 2021
Advertisement
ವೀರ ಯೋಧನ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಕೋರಿದರು.
Advertisement
Advertisement
ವಿಧಾನ ಪರಿಷತ್ತಿನಲ್ಲಿ ಸಚಿವರೊಬ್ಬರ ಕುರಿತು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರ ನೀಡಿದ ಮುಖ್ಯ ಮಂತ್ರಿಗಳು, ಸದನದ ಒಳಗೆ ಆಗಿರುವ ವಿಷಯಗಳಿಗೆ ಸದನ ಹೊರಗೆ ಉತ್ತರ ನೀಡಲು ಬರುವುದಿಲ್ಲ ಎಂದರು. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್