ವಾಷಿಂಗ್ಟನ್: ಕ್ಯಾಲಿಫೋರ್ನಿಯಾದಲ್ಲಿ (California) ಭಾನುವಾರ ಚೀನೀಯರ ಹೊಸ ವರ್ಷದ (Chinese New Year) ಆಚರಣೆ ವೇಳೆ ಕ್ಲಬ್ ಒಂದರಲ್ಲಿ ಗುಂಡಿನ ದಾಳಿ (Shooting) ನಡೆದಿತ್ತು. ಘನೆಯಲ್ಲಿ 10 ಜನರು ಸಾವನ್ನಪ್ಪಿದ್ದರು. ಆದರೆ ಶಂಕಿತ ಆರೋಪಿ ದಾಳಿಯ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಿತನನನ್ನು ಅಧಿಕಾರಿಗಳು ಹುಯು ಕ್ಯಾನ್ ಟ್ರಾನ್ (72) ಎಂದು ಗುರುತಿಸಿದ್ದಾರೆ. ಆತನೂ ಕೂಡಾ ಚೀನಾ ಮೂಲದ ವ್ಯಕ್ತಿಯಾಗಿದ್ದು, ಇತ್ತೀಚೆಗಷ್ಟೇ ಕ್ಯಾಲಿಫೋರ್ನಿಯಾಗೆ ಬಂದಿದ್ದ. ಆತ ಕ್ಲಬ್‌ನಲ್ಲಿ ಚೀನೀ ಜನರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
Advertisement
Advertisement
ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ದಾಳಿ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಂತಕನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆತ ಕಾರೊಂದರಲ್ಲಿ ಅವಿತುಕೊಂಡು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗೂ ಕ್ಯಾರೆ ಅನ್ನದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ಬೈಕ್ ರೈಡ್
Advertisement
Advertisement
ಘಟನೆ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಅವರ ಪತ್ನಿ ಜಿಲ್ ಬೈಡನ್ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಅಮೆರಿಕದಲ್ಲಿ ಗನ್ ಹಿಂಸಾಚಾರ ದೊಡ್ಡ ಸಮಸ್ಯೆಯಾಗಿದೆ. ಕಳೆದ ವರ್ಷ 647 ಸಾಮೂಹಿಕ ಗುಂಡಿನ ದಾಳಿಗಳು ನಡೆದಿವೆ. ಇದನ್ನೂ ಓದಿ: ಬಿಹಾರದಲ್ಲಿ ಮತ್ತೆ ಕಳ್ಳಭಟ್ಟಿ ಸೇವಿಸಿ 3 ಸಾವು, 6 ಮಂದಿ ಆಸ್ಪತ್ರೆ ದಾಖಲು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k