ಬೆಂಗಳೂರು: ಮಹದಾಯಿ (Mahadayi), ಕಳಸಾ-ಬಂಡೂರಿ (Kalasa-Banduri)ಯೋಜನೆ ಕಾಮಗಾರಿ ಪ್ರಾರಂಭ ಮಾಡುವ ಪ್ರಸ್ತಾವನೆಯನ್ನು ಕೇಂದ್ರದ ವನ್ಯಜೀವಿ ಮಂಡಳಿ ತಿರಸ್ಕಾರ ಮಾಡಿರುವ ಹಿನ್ನಲೆಯಲ್ಲಿ ಕೂಡಲೇ ಸರ್ವಪಕ್ಷಗಳ ಸಭೆ ಕರೆಯುವಂತೆ ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಕಾಂಗ್ರೆಸ್ ಶಾಸಕ ಕೋನರೆಡ್ಡಿ (Konareddy) ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ: ರಾಜ್ಯದಲ್ಲಿ 1 ಕೋಟಿ ನೋಂದಣಿ ಗುರಿ
ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಬಹುದಿನಗಳ ಕನಸು ಕಳಸಾ-ಬಂಡೂರಿ, ಮಹದಾಯಿ ಯೋಜನೆಗಳು. 20 ವರ್ಷಗಳಿಂದ ಹೋರಾಟ ನಡೆದುಕೊಂಡು ಬಂದಿದ್ದು, ಎಲ್ಲವೂ ಮುಗಿದಿದೆ. ಯೋಜನೆ ಪ್ರಾರಂಭವಾಗುವ ನಿರೀಕ್ಷೆ ರಾಜ್ಯದ ಜನತೆಗೆ ಇತ್ತು. ಮೊನ್ನೆ ಕೇಂದ್ರ ವನ್ಯಜೀವಿ ಮಂಡಳಿಯು ಅನುಮತಿಯನ್ನು ತಿರಸ್ಕರಿಸಿದೆ. ಸಿಎಂ ಕೂಡಲೇ ಸರ್ವಪಕ್ಷಗಳ ಸಭೆ ಮತ್ತು ಆ ಭಾಗದ ಶಾಸಕರನ್ನು ಕರೆದು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಮನವಿ ಮಾಡಿದ್ದೇನೆ. ಸಿಎಂ ಶೀಘ್ರವೇ ಇದರ ಬಗ್ಗೆ ವಿಚಾರ ಮಾಡಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು.
ಚುನಾವಣೆ ಪೂರ್ವದಲ್ಲಿ ಬಿಜೆಪಿಯವರು ಸಾಕಷ್ಟು ಭಾಷಣ ಮಾಡಿದ್ದರು. ಮಹದಾಯಿ ಯೋಜನೆಯನ್ನು ನಾವು ಮಾಡೇ ಮಾಡುತ್ತೇವೆ ಎಂದಿದ್ದರು. ಇವತ್ತು ಬಿಜೆಪಿಯವರು ತಮ್ಮ ಮಾತನ್ನು ಮರೆತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರಿಗೆ ನಾನು ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರದಿಂದ ಯೋಜನೆ ಪ್ರಾರಂಭಕ್ಕೆ ಅನುಮತಿ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಎದೆಮೂಳೆ ಮುರಿತ, ವೃಷಣಕ್ಕೆ ಹಾನಿ; 600 ರೂ.ನ ಮೆಗ್ಗಾರ್‌ನಿಂದ ಕರೆಂಟ್ ಶಾಕ್ ಕೊಟ್ಟು ಹಿಂಸೆ