– ಮೂರು ಜಿಲ್ಲೆ, 5 ತಾಲೂಕುಗಳಲ್ಲಿ ಇಡೀ ರಾತ್ರಿ ಸುತ್ತಾಟ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar( ಅವರಿಗೆ ನಿಂದಿಸಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಸದ್ಯ ಈ ಘಟನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಸಿ.ಟಿ ರವಿ ಬಂಧನ (CT Ravi Arrest) ಖಂಡಿಸಿ ಡಿ. 20ರಂದು ಚಿಕ್ಕಮಗಳೂರು ನಗರ ಬಂದ್‌ಗೆ (Chikkamagaluru Bandh) ನಗರ ಬಿಜೆಪಿ ಕರೆ ಕೊಟ್ಟಿದೆ.
Advertisement
ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಗಸ್ತು ತಿರುಗುತ್ತಿದ್ದಾರೆ. ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
3 ಜಿಲ್ಲೆ 5 ತಾಲ್ಲೂಕಿನಲ್ಲಿ ಇಡೀ ರಾತ್ರಿ ಸುತ್ತಾಟ:
ನಿನ್ನೆ ಸಂಜೆ ಸಿ.ಟಿ ರವಿ ಅವರನ್ನು ಬಂಧಿಸಿರುವ ಪೊಲೀಸರು ರಾತ್ರಿಯಿಡೀ ಜಿಲ್ಲೆಯನ್ನ ಸುತ್ತಾಡಿಸಿದ್ದಾರೆ. ಇದರಿಂದ ತಮಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಸಿ.ಟಿ ರವಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಆರೋಪ – ಸಿ.ಟಿ ರವಿ ವಿರುದ್ಧ ಎಫ್‌ಐಆರ್
Advertisement
Advertisement
ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಮದುರ್ಗ, ಸವದತ್ತಿ, ಬೈಲಹೊಂಗಲ, ಯರಗಟ್ಟಿ ಮೂಲಕ ಮತ್ತೆ ಬೆಳಗಾವಿಯತ್ತ ಕರೆತಂದಿದ್ದಾರೆ. ಸಿ.ಟಿ ರವಿಗೆ ಉಪಹಾರ, ಕಾಫಿ, ಟೀ ವ್ಯವಸ್ಥೆ ಮಾಡಿಕೊಟ್ಟ ಪೊಲೀಸರು ರಾತ್ರಿಯಿಡೀ ಜಾಗರಣೆ ಮಾಡಿಸಿದ್ದಾರೆ. ಇಂದು ಬೆಳಗ್ಗೆ ಯರಗಟ್ಟಿ ಬಳಿಯ ಡಾಬಾದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಖಾನಾಪುರ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ:
ಇನ್ನೂ ಸಿ.ಟಿ ರವಿ ಅವರನ್ನ ಬೆಂಗಳೂರಿಗೆ ಕರೆತರುವ ವೇಳೆ ಖಾನಾಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ ನಡೆದಿದೆ. ಹಣೆಗೆ ಪೆಟ್ಟಾಗಿ ರಕ್ತ ಸೋರುತ್ತಿದ್ದರೂ, ಪೊಲೀಸರು ಸಿ.ಟಿ ರವಿ ಅವರನ್ನ ಹೊತ್ತು ವಾಹನದಲ್ಲಿ ಹಾಕಿದ್ದಾರೆ. ಈ ವೇಳೆ ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಸಿ.ಟಿ ರವಿ ಚೀರಾಡಿದ್ದಾರೆ. ರಸ್ತೆ ಮಧ್ಯೆ ಧರಣಿ ಕುಳಿತು, ನನ್ನನ್ನ ಕೊಲೆ ಮಾಡಲು ಪ್ರಯತ್ನ ಮಾಡ್ತಿದ್ದೀರಿ, ನೀವು ಅಧಿಕಾರಿಗಳಂತೆ ನಡೆದುಕೊಳ್ತಿದ್ದೀರಾ? ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ನೂಕಾಟದಿಂದ ಬಿಜೆಪಿಯ ಇಬ್ಬರು ಸಂಸದರಿಗೆ ಗಾಯ – ರಾಹುಲ್ ಗಾಂಧಿ ವಿರುದ್ಧ FIR
ಠಾಣೆ ಮುಂದೆ ಬಿಜೆಪಿ ಪ್ರತಿಭಟನೆ:
ಸಿ.ಟಿ ರವಿ ಬಂಧನ ಖಂಡಿಸಿ ತಡರಾತ್ರಿ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಆರ್. ಅಶೋಕ್, ರಾಜ್ಯವನ್ನು ಕಾಂಗ್ರೆಸ್‌ನವರು ಮಿನಿ ಪಾಕಿಸ್ತಾನ ಮಾಡಿದ್ದಾರೆ, ಸಿಟಿ ರವಿ ಜನಪ್ರತಿನಿಧಿಯೆಂಬುದನ್ನು ಮರೆತು ಹಲ್ಲೆ ಮಾಡಿದ್ದಾರೆ. ಸಿಟಿ ರವಿ ಹಣೆಗೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ, ಪೊಲೀಸರಿಗೆ ನಮ್ಮ ಸರ್ಕಾರ ಬಂದ ಬಳಿಕ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಕ್ತ ಬರುವಂತೆ ಸಿ.ಟಿ ರವಿ ಮೇಲೆ ಹಲ್ಲೆ – ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆಂದು ಚೀರಾಡಿದ ಎಂಎಲ್‌ಸಿ