ಬೆಳಗಾವಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ (Tipu Jayanti) ಆಚರಣೆ ಕೂಗು ಎದ್ದಿದೆ. ರಾಜ್ಯ ಸರ್ಕಾರದ ವತಿಯಿಂದ ಮತ್ತೆ ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಬೇಡಿಕೆ ಇಟ್ಟಿದ್ದಾರೆ.
ನಾಳೆ ವಿಧಾನಸಭೆಯಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ನಾಳೆ ವಿಧಾನಸಭೆಯಲ್ಲಿ ಸರ್ಕಾರದ ಉತ್ತರ ಏನು? ಮತ್ತೆ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಒಪ್ಪುತ್ತಾ ಅನ್ನೋದು ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿದ್ದಷ್ಟು ವರ್ಷ ನೆಹರು ದೇಶಕ್ಕಾಗಿ ಜೈಲಿನಲ್ಲಿದ್ದರು: ಪ್ರಿಯಾಂಕಾ ಗಾಂಧಿ ಕಿಡಿ
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲೇ 2016ರಲ್ಲಿ ಟಿಪ್ಪು ಜಯಂತಿ ಆಚರಣೆ ಆರಂಭಿಸಿತ್ತು. ಆದರೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ದೇಶ ಸಮಸ್ಯೆಗಳಿಂದ ಬಳಲುತ್ತಿರುವಾಗ ವಂದೇ ಮಾತರಂ ಚರ್ಚೆ ಅಗತ್ಯವಿತ್ತೇ? – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

