ಡುಮ್ಮ ಅಂದಿದ್ದಕ್ಕೆ ಅತಿಥಿಗಳಿಗೆ ಗುಂಡಿಕ್ಕಿದ ಭೂಪ

Public TV
1 Min Read
UP Police

ಲಕ್ನೋ (ಗೋರಖ್‌ಪುರ): ತನ್ನನ್ನು ಡುಮ್ಮ, ಬೊಬ್ಬು ಎಂದು ಕರೆದಿದ್ದಕ್ಕೆ ಕೋಪಗೊಂಡ ಯುವಕ, ಇಬ್ಬರು ಅತಿಥಿಗಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ (Gorakhpur) ಜಿಲ್ಲೆಯಲ್ಲಿ ನಡೆದಿದೆ.

ಘಟನೆ ನಡೆದ ಮರುದಿನ ಖಜ್ನಿ ಪೊಲೀಸ್ ಠಾಣೆಯಲ್ಲಿ (Khajni police Station) ದೂರು ದಾಖಲಾಗಿದ್ದು, ನಂತರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬೆಲ್‌ಘಾಟ್ ಪ್ರದೇಶದ ನಿವಾಸಿ ಅರ್ಜುನ್ ಚೌಹಾಣ್ ಬಂಧಿತ ಆರೋಪಿ. ಇದನ್ನೂ ಓದಿ: ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

Crime 1

ಅಷ್ಟಕ್ಕೂ ಆಗಿದ್ದೇನು?
ಅರ್ಜುನ್‌ ಇತ್ತೀಚೆಗೆ ತನ್ನ ಚಿಕ್ಕಪ್ಪನೊಂದಿಗೆ ದೇವಸ್ಥಾನವೊಂದರಲ್ಲಿ ನಡೆಯುತ್ತಿದ್ದ ಔತಣಕೂಟಕ್ಕೆ ಹೋಗಿದ್ದ. ಈ ವೇಳೆ ಮಂಜರಿಯಾದ ಅನಿಲ್ ಚೌಹಾಣ್ ಮತ್ತು ಶುಭಮ್ ಚೌಹಾಣ್ ಎಂಬ ಇಬ್ಬರು ಅತಿಥಿಗಳು ತಾನು ಡುಮ್ಮ, ಬೊಜ್ಜು ಅಂತ ಸಿಕ್ಕಾಪಟ್ಟೆ ಅಪಹಾಸ್ಯ ಮಾಡುತ್ತಿದ್ದರು. ಇದರಿಂದ ಕೋಪಗೊಂಡ ಅರ್ಜುನ್‌ ತನ್ನ ಸ್ನೇಹಿತ ಆಸಿಫ್‌ ಖಾನ್‌ ಜೊತೆಗೆ ಆ ಇಬ್ಬರು ಅತಿಥಿಗಳನ್ನ ಹಿಂಬಾಲಿಸಿದ್ದ. ಗೋರಖ್‌ಪುರದ ತೆನುವಾ ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸಿ, ಇಬ್ಬರನ್ನೂ ಹೊರಗೆಳೆದು ಗುಂಡು ಹಾರಿಸಿ ಪರಾರಿಯಾಗಿದ್ದ ಎಂದು ದಕ್ಷಿಣ ಎಸ್ಪಿ ಜಿತೇಂದ್ರ ಕುಮಾರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್‌ ದೋವಲ್‌ಗೆ ಫೋನ್‌ ಕರೆಯಲ್ಲಿ ಚೀನಾ ಸ್ಪಷ್ಟನೆ

ಗುಂಡೇಟು ಬಿದ್ದಿದ್ದ ಇಬ್ಬರನ್ನೂ ಅಲ್ಲಿನ ದಾರಿಹೋಕರು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದರು, ಹೆಚ್ಚುವರಿ ಚಿಕಿತ್ಸೆಗಾಗಿ ಅವರನ್ನ ಗೋರಖ್‌ ಪುರ ಜಿಲ್ಲಾ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಶುಭಂ ಚೌಹಾಣ್ ಅವರ ತಂದೆಯ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದ್ದು, ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು – ಕಾವೇರಿ ನದಿಯಲ್ಲಿ ಶವ ಪತ್ತೆ

Share This Article