ಬೆಂಗಳೂರು: ವಿಧಾನಮಂಡಳದ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ ಕರೆಯಿಸುವ ರಾಜ್ಯ ಸರ್ಕಾರದ ತೀರ್ಮಾನ ಸಂಸದೀಯ ಪ್ರಜಾಸತ್ತೆಯ ಮೌಲ್ಯಗಳಿಗೆ ವಿರುದ್ಧವಾದದ್ದು. ಈ ರೀತಿಯ ಉದಾಹರಣೆ ಕರ್ನಾಟಕದ ಇತಿಹಾಸದಲ್ಲಿ ನಡೆದಿರಲಿಲ್ಲ. ಈ ನಡೆಯ ಮೂಲಕ ಕೆಟ್ಟ ಪರಂಪರೆಯೊಂದನ್ನು ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ವಿಧಾನಮಂಡಳದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವ ಅವಕಾಶ ಇರುವುದು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮಾತ್ರ. ಲೋಕಸಭೆ ಸ್ಪೀಕರ್ ಕರೆಯಿಸುವ ಮೂಲಕ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಇದು ಪ್ರಜಾತಂತ್ರ ವ್ಯವಸ್ಥೆಯ ಅಣಕ. ಲೋಕಸಭೆ ಮತ್ತು ವಿಧಾನಸಭೆ ಎರಡೂ ಕೂಡ ಜನಪ್ರತಿನಿಧಿಗಳ ಸಭೆ. ಒಂದು ಹೆಚ್ಚು, ಒಂದು ಕಡಿಮೆಯಲ್ಲ. ಎರಡೂ ಕೂಡ ಭಾರತ ಸಂವಿಧಾನದ ಪ್ರಕಾರವೇ ನಡೆಯುತ್ತದೆ. ವಿಧಾನಮಂಡಳದಲ್ಲಿ ಲೋಕಸಭೆ ಸ್ಪೀಕರ್ ಕರೆಯಿಸುವ ಔಚಿತ್ಯವಾದರೂ ಏನು? ಈ ಸಂಪ್ರದಾಯ ಹುಟ್ಟುಹಾಕುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರನ್ನು ಮನೆ ಬಾಗಿಲಿಗೆ ಬರಮಾಡಿಕೊಳ್ಳಲಿದ್ದಾರೆ ಹೆಚ್‍ಡಿಕೆ
Advertisement
Advertisement
ಒಕ್ಕೂಟ ಸರ್ಕಾರ ಭಾರತ ಗಣರಾಜ್ಯದ ಒಕ್ಕೂಟ ತತ್ತ್ವಗಳನ್ನು ಒಂದೊಂದಾಗಿ ಮುರಿಯುತ್ತ ಬರುತ್ತಿದೆ. ಎಲ್ಲ ವಿಷಯದಲ್ಲೂ ಏಕತ್ವವನ್ನು ಹೇರುವ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತ ಬರುತ್ತಿದೆ. ಕರ್ನಾಟಕ ಸರ್ಕಾರವೂ ಈ ಖೆಡ್ಡಾಗೆ ಬಿದ್ದು ತನ್ನತನವನ್ನು ಕಳೆದುಕೊಳ್ಳಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳಿಗೆ ಲಸಿಕೆ: ಪ್ರಭು ಚವ್ಹಾಣ್
Advertisement
ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಸಭಾಧ್ಯಕ್ಷರು ಕೂಡಲೇ ನಾಳಿನ ಜಂಟಿ ಅಧಿವೇಶವನ್ನು ರದ್ದುಗೊಳಿಸಬೇಕು. ಲೋಕಸಭೆ ಸ್ಪೀಕರ್ ಜತೆ ಬೇರೆ ಸ್ಥಳದಲ್ಲಿ ಕಾರ್ಯಕ್ರಮ ನಡೆಸಿಕೊಳ್ಳಲಿ. ಕರ್ನಾಟಕ ವಿಧಾನಮಂಡಳದ ಪಾವಿತ್ರ್ಯತೆಯನ್ನು ಹಾಳುಗೆಡಹುವುದು ಬೇಡ ಎಂದು ಕಟುವಾಗಿ ಹೇಳಿದ್ದಾರೆ.