ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

Public TV
1 Min Read
Thailand Cambodia conflict

– ಸಂಘರ್ಷದಲ್ಲಿ ಎರಡೂ ದೇಶಗಳಿಂದ ಮೃತರ ಸಂಖ್ಯೆ 32ಕ್ಕೆ ಏರಿಕೆ

ನೋಮ್ ಪೆನ್: ಕಾಂಬೋಡಿಯಾ ಮತ್ತು ಥೈಲ್ಯಾಂಡ್‌ (Thailand-Cambodia Conflict) ಗಡಿ ಘರ್ಷಣೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಿಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸಲಹೆ ನೀಡಿದೆ.

ಆಗ್ನೇಯ ಏಷ್ಯಾದ ಕಾಂಬೋಡಿಯಾ-ಥೈಲ್ಯಾಂಡ್ ಗಡಿಯಲ್ಲಿ ನಡೆಯುತ್ತಿರುವ ಘರ್ಷಣೆಗಳ ಹಿನ್ನೆಲೆಯಲ್ಲಿ, ಭಾರತೀಯ ಪ್ರಜೆಗಳು ಗಡಿ ಪ್ರದೇಶಗಳಿಗೆ ಪ್ರಯಾಣಿಸುವುದನ್ನು ನಿಲ್ಲಿಸಲು ಸೂಚಿಸಲಾಗಿದೆ ಎಂದು ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅಂದು ಇಂಡಿಯಾ ಔಟ್‌ – ಇಂದು ಸೇನಾ ಕಚೇರಿಯಲ್ಲೇ ದೊಡ್ಡ ಕಟೌಟ್‌ | ಇದು ಮೋದಿ ಮ್ಯಾಜಿಕ್‌

ಕಾಂಬೋಡಿಯಾದ ರಾಜಧಾನಿ ನೋಮ್ ಪೆನ್‌ನಲ್ಲಿರುವ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ತುರ್ತು ಸಂಪರ್ಕ ಮಾಹಿತಿಯನ್ನು ಹಂಚಿಕೊಂಡಿದೆ. ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಭಾರತೀಯ ಪ್ರಜೆಗಳು ಭಾರತದ ರಾಯಭಾರ ಕಚೇರಿ, ನೋಮ್ ಪೆನ್ ಅನ್ನು +855 92881676 ಗೆ‌ ಕರೆ ಮಾಡಿ ಸಂಪರ್ಕಿಸಬಹುದು ಎಂದು ಸೂಚಿಸಿದೆ.

ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಘರ್ಷಣೆಗಳು ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿವೆ. ಕಾಂಬೋಡಿಯಾದ ರಕ್ಷಣಾ ಸಚಿವಾಲಯವು ಈವರೆಗೆ ಹೋರಾಟದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಇದರಲ್ಲಿ ಎಂಟು ನಾಗರಿಕರು ಮತ್ತು ಐದು ಸೈನಿಕರು ಸೇರಿದ್ದಾರೆ. 71 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಿವನ ದೇವಸ್ಥಾನಕ್ಕಾಗಿ ಥಾಯ್ಲೆಂಡ್, ಕಾಂಬೋಡಿಯಾ ಮಧ್ಯೆ ಗಡಿಯಲ್ಲಿ ಘರ್ಷಣೆ!

ಶುಕ್ರವಾರ ಐದು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಥಾಯ್ ಸೇನೆ ತಿಳಿಸಿದೆ. ಇದರಿಂದಾಗಿ 14 ನಾಗರಿಕರು ಮತ್ತು ಆರು ಸೈನಿಕರು ಸೇರಿದಂತೆ ಥೈಲ್ಯಾಂಡ್‌ನ ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ. ಎರಡೂ ದೇಶಗಳಿಂದ ಒಟ್ಟು ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

Share This Article