ಬೆಳಗಾವಿ: ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ 3 ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.
Advertisement
50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ 7 ಬೋನು ಇರಿಸಿ, ಕ್ಯಾಮೆರಾ ಅಳವಡಿಸಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ ಸರ್ಕಾರಿ, ಖಾಸಗಿ ಶಾಲೆಗಳಿಗೆ ಡಿಡಿಪಿಐ ಮೌಖಿಕ ಆದೇಶದನ್ವಯ ಬೆಳಗಾವಿ ನಗರ ಬಿಇಒ ರಜೆ ಘೋಷಿಸಿದ್ದಾರೆ. ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ಸಹ್ಯಾದ್ರಿ ನಗರ ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ. ಇದನ್ನೂ ಓದಿ: ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ – ಮಗ ಮನೆಗೆ ಬಂದಾಗ ಅಸುನೀಗಿದ ಅಮ್ಮ
Advertisement
Advertisement
ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ಜಾಧವ ನಗರದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಜಾಧವ್ ನಗರದ ಖನಗಾವಿ ಕೆಎಚ್ ಗ್ರಾಮದ ಕಟ್ಟಡ ಕಾರ್ಮಿಕನಾಗಿದ್ದ ಸಿದರಾಯಿ ಮಿರಜಕರ್ (38) ಮೇಲೆ ಚಿರತೆ ದಾಳಿ ನಡೆಸಿತ್ತು. ದಾಳಿಯಲ್ಲಿ ಸಿದರಾಯಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆ ಬಳಿಕ ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದು, ಭಯದಲ್ಲೇ ದಿನ ಕಳೆಯುವಂತಾಗಿದೆ. ಇದನ್ನೂ ಓದಿ: ವಿದ್ಯಾರ್ಥಿನಿಗೆ ಚುಡಾಯಿಸಿದ ವಿದ್ಯಾರ್ಥಿ – ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಮಾರಾಮಾರಿ