ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ – ಸುಪ್ರೀಂ ತೀರ್ಪು

Public TV
1 Min Read
Supreme Court 1

ನವದೆಹಲಿ: ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನಕ್ಕಾಗಿ (Divorce) ಆರು ತಿಂಗಳ ಕಡ್ಡಾಯವಾಗಿ ಕಾಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ.

ಪತಿ ಹಾಗೂ ಪತ್ನಿಯ ಒಪ್ಪಿಗೆ ಇದ್ದಾಗ ಕೌಟುಂಬಿಕ ನ್ಯಾಯಾಲಯವನ್ನು ಒಪ್ಪಿಸದೇ ಮದುವೆಯನ್ನು ರದ್ದು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಉಗ್ರರ ಸಂಪರ್ಕಕ್ಕೆ ಮೊಬೈಲ್ ಆಪ್ ಬಳಕೆ – 14 ಅಪ್ಲಿಕೇಷನ್ ನಿಷೇಧಿಸಿದ ಕೇಂದ್ರ

divorce

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಮತ್ತು ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಂವಿಧಾನಿಕ ಪೀಠ (Constitution Bench) ಸಂವಿಧಾನದ 142ನೇ (Article 142) ವಿಧಿಯನ್ನು ಬಳಸಿಕೊಂಡು ಈ ತೀರ್ಪು ನೀಡಿದೆ.

ಹಿಂದೂ ವಿವಾಹ ಕಾಯ್ದೆಯ  (Hindu Marriage Act) ಸೆಕ್ಷನ್ 13 ಬಿ ಅಡಿಯಲ್ಲಿ ಸೂಚಿಸಿದಂತೆ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನಕ್ಕಾಗಿ ಕಡ್ಡಾಯ ಕಾಯುವ ಅವಧಿಯನ್ನು ರದ್ದುಗೊಳಿಸಬೇಕೆಂದು ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

ಏನಿದು 142ನೇ ವಿಧಿ?
ತನ್ನ ಮುಂದೆ ಬಾಕಿ ಇರುವ ಯಾವುದೇ ವಿಷಯ ಅಥವಾ ವಿಷಯದಲ್ಲಿ ತನ್ನ ವಿಶೇಷ ಅಧಿಕಾರವನ್ನು ಚಲಾಯಿಸಲು ಸುಪ್ರೀಂ ಕೋರ್ಟ್ 142ನೇ ವಿಧಿಯನ್ನು ಬಳಸುತ್ತದೆ. “ಸುಪ್ರೀಂ ಕೋರ್ಟ್ ತನ್ನ ಅಧಿಕಾರ ವ್ಯಾಪ್ತಿಯ ವ್ಯಾಯಾಮದಲ್ಲಿ, ತನ್ನ ಮುಂದೆ ಬಾಕಿ ಉಳಿದಿರುವ ಯಾವುದೇ ವಿಷಯ ಅಥವಾ ವಿಷಯದಲ್ಲಿ ಪೂರ್ಣ ನ್ಯಾಯವನ್ನು ಮಾಡಲು ಅಗತ್ಯವಾದ ಆದೇಶವನ್ನು ನೀಡಬಹುದು ಅಥವಾ ಅಂತಹ ಆದೇಶವನ್ನು ಮಾಡಬಹುದು ಎಂದು ಹೇಳುತ್ತದೆ. ಸುಪ್ರೀಂ ಕೋರ್ಟ್ ಈಗ ಈ ವಿಧಿಯನ್ನು ಬಳಸಿಕೊಂಡು ಮಹತ್ವದ ತೀರ್ಪು ನೀಡಿದೆ. ಇದನ್ನೂ ಓದಿ: ಅದಾನಿ ಸಮೂಹ ವಿರುದ್ಧದ ಹಿಂಡೆನ್‍ಬರ್ಗ್ ವರದಿ ತನಿಖೆ – 6 ತಿಂಗಳ ಕಾಲಾವಕಾಶ ವಿಸ್ತರಣೆಗೆ ಸೆಬಿ ಮನವಿ

Share This Article