ಭಾರತದ ಜೊತೆ ಚೇಷ್ಟೆ – ಶೀಘ್ರವೇ ಜಸ್ಟಿನ್‌ ಟ್ರುಡೋ ರಾಜೀನಾಮೆ?

Public TV
1 Min Read
Justin Trudeau 1

ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡುತ್ತಿರುವ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ನಡೆದ ಸಂಸದರ ಸಭೆಯಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿದೆ. 24 ಸಂಸದರು ಅ.28ರ ಒಳಗಡೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ಏರೋಸ್ಪೇಸ್‌ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್‌, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್‌

Khalistani

ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಾಡದ ಮಾಧ್ಯಮಗಳು ವರದಿ ಮಾಡಿವೆ.

ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಂಸದರಿಗೆ ಮಾತನಾಡಲು ಅವಕಾಶ ನೀಡಲಾಗಿತ್ತು. ಕ್ಯಾಬಿನೆಟ್‌ ಮಂತ್ರಿ ಸ್ಥಾನ ಹೊಂದಿರದ ಸುಮಾರು 20 ಮಂದಿ ಸದಸ್ಯರು ಮುಂದಿನ ಚುನಾವಣೆಗೆ ಮೊದಲು ಟ್ರುಡೊ ಅವರನ್ನು ಪ್ರಧಾನಿ ಪಟ್ಟದಿಂದ ಕೆಳಗೆ ಇಳಿಸಬೇಕೆಂದು ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಆದರೆ ಅ.16  ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಕೆ ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

 

Share This Article