ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.
ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ಟ್ರುಡೋ ಯಾವಾಗ ರಾಜೀನಾಮೆ ಘೋಷಿಸುತ್ತಾರೆ ಎಂಬುದು ಖಚಿತವಾಗಿ ತಿಳಿದಿಲ್ಲ. ಬುಧವಾರದ ಪಕ್ಷದ ರಾಷ್ಟ್ರೀಯ ಸಭೆ ನಡೆಯುವ ಮೊದಲೇ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟ್ರಂಪ್ ಪ್ರಮಾಣವಚನ ಸಮಾರಂಭ – 8.57 ಕೋಟಿ ದೇಣಿಗೆ ನೀಡಲಿದ್ದಾರೆ ಟಿಮ್ ಕುಕ್
Advertisement
Advertisement
ಪಕ್ಷದ ಆಂತಂರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕಾಏಕಿ ರಾಜೀನಾಮೆ ಘೋಷಣೆ ಮಾಡುತ್ತಾರಾ ಅಥವಾ ಹೊಸ ನಾಯಕತ್ವ ಆಯ್ಕೆವರೆಗೂ ಪ್ರಧಾನಿಯಾಗಿ ಮುಂದುವರೆಯುತ್ತಾರೋ ಇನ್ನೂ ಸ್ಪಷ್ಟವಾಗಿಲ್ಲ . ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್ – ಪಂಚ್ ದೇಶದ ನಂ.1 ಕಾರು!
Advertisement
ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ.
Advertisement
ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು.
ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಆದರೆ ಅಕ್ಟೋಬರ್ 16 ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಜಸ್ಟಿನ್ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್ ಗೋಲ್ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.