ಒಟ್ಟಾವಾ: ಖಲಿಸ್ತಾನಿ (Khalistan) ಉಗ್ರ ಸಂಘಟನೆಯ ವಿಚಾರವನ್ನೇ ಮುಂದಿಟ್ಟುಕೊಂಡು ಭಾರತದೊಂದಿಗೆ ಪದೇ ಪದೇ ಖ್ಯಾತೆ ತೆಗೆಯುತ್ತಿರುವ ಕೆನಡಾದ (Canada), ಈಗ ಮತ್ತೊಂದು ಕುಚೇಷ್ಟೆ ಮಾಡಿದೆ. ಕೆನಡಾ ಸರ್ಕಾರ ಭಾರತವನ್ನು ಸೈಬರ್ ಬೆದರಿಕೆ ಪಟ್ಟಿಗೆ (Cyber Adversary Label) ಸೇರಿಸಿದೆ. ತನ್ನ ವಿರುದ್ಧ ಭಾರತ ಸರ್ಕಾರ ಪ್ರಾಯೋಜಿತ ಬೇಹುಗಾರಿಕೆ ನಡೆಯಬಹುದು ಎಂದು ಆರೋಪಿಸಿದೆ.
Advertisement
ಕೆನಡಾ ಸರ್ಕಾರದ ಈ ನಡೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ (NCTA) 2025-26 ವರದಿ ಬಿಡುಗಡೆಯಾಗಿದೆ. ಕೆನಡಾದ ಸೈಬರ್ ಭದ್ರತೆಯ ತಾಂತ್ರಿಕ ಪ್ರಾಧಿಕಾರ ʻಸೈಬರ್ ಸೆಕ್ಯುರಿಟಿ ಕೇಂದ್ರʼ ಅಕ್ಟೋಬರ್ 30 ರಂದು ಈ ವರದಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಇಸ್ರೇಲ್ ಮೇಲೆ ದಾಳಿ ಬೆದರಿಕೆ – ಇರಾನ್ ಸರ್ವೋಚ್ಚ ನಾಯಕನ ಎಕ್ಸ್ ಖಾತೆ ಅಮಾನತು
Advertisement
Advertisement
ಅದರಲ್ಲಿ, ಚೀನಾ, ರಷ್ಯಾ, ಇರಾನ್ ಮತ್ತು ಉತ್ತರ ಕೊರಿಯಾದ ನಂತರದ ಸ್ಥಾನದಲ್ಲಿ ಭಾರತವನ್ನು ಹೆಸರಿಸಲಾಗಿದೆ. ಬೇಹುಗಾರಿಕೆ ಉದ್ದೇಶದಿಂದ ಭಾರತ ಪ್ರಾಯೋಜಿತ ವ್ಯಕ್ತಿಗಳು ಕೆನಡಾ ಸರ್ಕಾರದ ನೆಟ್‌ವರ್ಕ್‌ಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆ ಇದೆ ಎಂದು ಅಂದಾಜಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಿದೆ. ಅಂದಹಾಗೆ, 2018, 2020 ಮತ್ತು 2023-24ರಲ್ಲಿ ಪ್ರಕಟವಾಗಿದ್ದ ವರದಿಗಳಲ್ಲಿ ಭಾರತದ ಹೆಸರು ಉಲ್ಲೇಖವಾಗಿರಲಿಲ್ಲ.
Advertisement
ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ 2025-2026 ವರದಿಯನ್ನು ಟೀಕಿಸಿದ್ದಾರೆ. ಭಾರತ ಇಡೀ ವಿಶ್ವದಲ್ಲಿ ಶಾಂತಿ ಕಾಪಾಡಲು ಪ್ರಯತ್ನಿಸುತ್ತಿದೆ. ಆದ್ರೆ ಕೆನಡಾ ಯಾವುದೇ ಪುರಾವೆಗಳಿಲ್ಲದೇ ಆರೋಪ ಮಾಡಿದೆ. ಇದು ಭಾರತದ ಮೇಲೆ ಕೆನಡಾ ದಾಳಿ ಮಾಡುವ ಮತ್ತೊಂದು ತಂತ್ರಕ್ಕೆ ಉದಾಹರಣೆಯಾಗಿದೆ, ಇದು ತಪ್ಪು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ-ಚೀನಾ ಹ್ಯಾಂಡ್‌ಶೇಕ್; ಫಲ ನೀಡುತ್ತಾ ಒಪ್ಪಂದ?
2023ರ ಜೂನ್‌ನಲ್ಲಿ ಕೆನಡಾದಲ್ಲಿ ನಡೆದಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಪಾತ್ರದ ಬಗ್ಗೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ವರ್ಷದ ಹಿಂದೆ ಹೇಳಿದ್ದರು.
ಟ್ರುಡೋ ಹೇಳಿಕೆಯನ್ನು ಭಾರತ ಅಲ್ಲಗಳೆದಿದೆಯಾದರೂ, ಉಭಯ ದೇಶಗಳ ಸಂಬಂಧ ಹದಗೆಟ್ಟಿದೆ. ಏತನ್ಮಧ್ಯೆ, ಸಿಖ್ ಪ್ರತ್ಯೇಕತಾವಾದಿಗಳನ್ನು ಹತ್ಯೆಗೈಯುವ ಸಂಚಿನಲ್ಲಿ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾದ ಸಚಿವರೊಬ್ಬರು ಇತ್ತೀಚೆಗೆ ಆರೋಪಿಸಿರುವುದು, ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್ ಸುಪ್ರೀಂ ಲೀಡರ್