ಹಾವೇರಿ: ವ್ಯಕ್ತಿಯೊಬ್ಬನು ಕೆನರಾ ಬ್ಯಾಂಕ್‍ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ನಡೆದಿದೆ.
ವಸೀಮ್ ಮುಲ್ಲಾ (33) ಬೆಂಕಿ ಹಚ್ಚಿದ ಆರೋಪಿ. ವಸೀಮ್ ರಟ್ಟೀಹಳ್ಳಿ ನಿವಾಸಿಯಾಗಿದ್ದು, ಬೆಳಗ್ಗಿನ ಜಾವ ಬ್ಯಾಂಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಬ್ಯಾಂಕಿನಲ್ಲಿದ್ದ ಕಾಗದ ಪತ್ರಗಳು ಹಾಗೂ ನಗದು ಹಣ ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ: ಬಿಜೆಪಿ ವ್ಯಂಗ್ಯ
ಗ್ರಾಮಸ್ಥರು ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಬ್ಯಾಂಕಿನ ಮ್ಯಾನೇಜರ್ ತನಗೆ ಲೋನ್ ಕೊಡಲಿಲ್ಲ ಎಂಬ ಕಾರಣಕ್ಕೆ ಬ್ಯಾಂಕಿನ ಗ್ಲಾಸ್ ಒಡೆದು ಬ್ಯಾಂಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿ ಕಟ್ಟಡದ ಮೇಲಿಂದ ಜಿಗಿದು ಹೋಗಲು ಯತ್ನಿಸುತ್ತಿದ್ದ ವೇಳೆ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಗಿನೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.