ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರ ರದ್ದು

Public TV
1 Min Read
EXAM

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ (University) ಪದವಿ ಪರೀಕ್ಷೆಗಳು (Exam) ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ವಿ.ವಿ. ಕುಲಪತಿ ಪ್ರೊ. ದಯಾನಂದ್‌ ಅಗಸರ್ ಅವರು ಬೀದರ್‌ ನಗರದ ಪರೀಕ್ಷಾ ಕೇಂದ್ರಗಳಿಗೆ (Exam Center) ದಿಢೀರ್‌ ಭೇಟಿ ‌ನೀಡಿದ ಸಂದರ್ಭದಲ್ಲಿ ವಿ.ವಿ.ಯ ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರಗಳನ್ನು ರದ್ದುಗೊಳಿಸಿದ್ದಾರೆ.

ಬೀದರಿನ‌ ಸನ್ ಶೈನ್ ಪದವಿ‌ ಮಹಾವಿದ್ಯಾಲಯಕ್ಕೆ‌ ಭೇಟಿ ನೀಡಿದಾಗ ಪರೀಕ್ಷಾ ಸಂದರ್ಭದಲ್ಲಿ ಸಿಸಿ ಟಿವಿ (CC TV) ಆಫ್ ಮಾಡಿರುವುದು ಮತ್ತು ಶಿಕ್ಷಕೇತರ ಸಿಬ್ಬಂದಿಯನ್ನು ಕೊಠಡಿ‌ ಮೇಲ್ವಿಚಾರಕರನ್ನಾಗಿ ನೇಮಿಸಿರುವುದನ್ನು‌ ಗಮನಿಸಲಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವಿ.ವಿ. ನಿಯಮಾನುಸಾರ ಪರೀಕ್ಷೆ ಜರುಗಿಸದ ಕಾರಣ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ತಕ್ಷಣದಿಂದ ರದ್ದುಪಡಿಸಿ, ವಿದ್ಯಾರ್ಥಿಗಳ (Student) ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಪರೀಕ್ಷೆಗಳನ್ನು ಸಮೀಪದ ಕರ್ನಾಟಕ ಪದವಿ ಮಹಾವಿದ್ಯಾಲಯಕ್ಕೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಸ್ಟೋನ್ ತೆಗೆಯುವ ನೆಪದಲ್ಲಿ ರೋಗಿಯ ಕಿಡ್ನಿಯನ್ನೇ ಎಗರಿಸಿದ್ರು

ಅದೇ ರೀತಿ ಬೀದರ್‌ ನಗರದ ರಾಯಲ್ ಪದವಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕ್ರಮವಾಗಿ ಆಸನಗಳನ್ನು ಜೋಡಿಸಿ ಕೂಡಿಸದೇ, ಗುಂಪು-ಗುಂಪಾಗಿ ಪರೀಕ್ಷೆಗಳು ನಡೆಸುತ್ತಿರುವುದು, ಒಬ್ಬ ವಿದ್ಯಾರ್ಥಿಗೆ ಪ್ರತ್ಯೇಕ ಕೋಣೆಯಲ್ಲಿ ಕೂಡಿಸಿ ಪರೀಕ್ಷೆ ಬರೆಸುತ್ತಿರುವುದು, ಸಿ.ಸಿ.ಟಿ.ವಿ ಕ್ಯಾಮೆರಾ ಆಫ್ ಮಾಡಿರುವುದರಿಂದ ಈ ಪರೀಕ್ಷಾ ಕೇಂದ್ರವನ್ನೂ ಸಹ ರದ್ದುಪಡಿಸಿ ಮುಂದಿನ ಪರೀಕ್ಷೆಗಳನ್ನು ಸಮೀಪದ ಬಿ.ವ್ಹಿ.ಬಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬರೆಯಲು ಆದೇಶಿಸಲಾಗಿದೆ‌ ಎಂದು ವಿ.ವಿ. ಕುಲಸಚಿವ (ಮೌಲ್ಯಮಾಪನ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಂಡಸರ ಸುದ್ದಿ ನನಗೆ ಬೇಡಪ್ಪ – ಅಶ್ವಥ್ ನಾರಾಯಣಗೆ ಡಿಕೆಶಿ ತಿರುಗೇಟು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *