Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀಸಲಾತಿ ರದ್ದು ಹೇಳಿಕೆ ವಿವಾದ – ರಾಹುಲ್ ಗಾಂಧಿ ಪರ ನಿಂತ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೀಸಲಾತಿ ರದ್ದು ಹೇಳಿಕೆ ವಿವಾದ – ರಾಹುಲ್ ಗಾಂಧಿ ಪರ ನಿಂತ ಸಿಎಂ

Bengaluru City

ಮೀಸಲಾತಿ ರದ್ದು ಹೇಳಿಕೆ ವಿವಾದ – ರಾಹುಲ್ ಗಾಂಧಿ ಪರ ನಿಂತ ಸಿಎಂ

Public TV
Last updated: September 12, 2024 5:12 pm
Public TV
Share
4 Min Read
Siddaramaiah Sri Chamundeshwari Development Authority Meeting 2
SHARE

ಬೆಂಗಳೂರು: ಮೀಸಲಾತಿ ಕುರಿತು ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ (BJP) ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ (CM Siddaramaiah) ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ ನಾಯಕರು ಮಾಡುವ ಪ್ರತಿಭಟನೆ, ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ. ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ? ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥಮಾಡಿಕೊಳ್ಳುವ ಜ್ಞಾನವಾಗಲಿ, ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ ಎಂದಿದ್ದಾರೆ.ಇದನ್ನೂ ಓದಿ: 714 ಡೈಮಂಡ್‌ಗಳಿರುವ ದುಬಾರಿ ವಾಚ್‌ ಧರಿಸಿದ ಸಲ್ಮಾನ್‌ ಖಾನ್‌

ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶವಾಗಿದೆ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ ನಾನೂ ಹೇಳುತ್ತೇನೆ. ಇದು ಹೇಗೆ ಮೀಸಲಾತಿ ವಿರೋಧಿ ಹೇಳಿಕೆ ಆಗುತ್ತದೆ? ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ (Baba Saheb Ambedkar) ಅವರು ಮೀಸಲಾತಿ ನೀತಿಯನ್ನು ಸಂವಿಧಾನದಲ್ಲಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮಾನ ಅವಕಾಶ ಇನ್ನೂ ಸಿಕ್ಕಿಲ್ಲ. ಸಾಮಾಜಿಕ ಅಸಮಾನತೆ ಕಡಿಮೆಯಾಗಿಲ್ಲ. ಇದಕ್ಕೆ ಬಿಜೆಪಿ ನಾಯಕರಂತಹ ಜಾತಿ ಪಟ್ಟಭದ್ರರು ಕಾರಣ ಎನ್ನುವುದು ಗೋಡೆ ಬರಹದಷ್ಟು ಸ್ಪಷ್ಟ ಎಂದು ನುಡಿದಿದ್ದಾರೆ.

ಬಿಜೆಪಿಯ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್ (RSS) ಹುಟ್ಟಿನಿಂದಲೇ ವರ್ಣವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಬಂದಿರುವುದಕ್ಕೆ ಇತಿಹಾಸವೇ ಸಾಕ್ಷಿ. ಸಾಮಾಜಿಕ ನ್ಯಾಯದಾನದ ಅವಕಾಶಗಳು ತೆರೆದುಕೊಂಡಾಗೆಲ್ಲ ಅದರ ವಿರುದ್ಧ ಹೋರಾಟ ನಡೆಸಿರುವುದು ಬಿಜೆಪಿ. ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ವಿರೋಧಿಸಿ ದಿವಂಗತ ನ್ಯಾ.ರಾಮ ಜೋಯಿಸ್‌ರಿಂದ ಸುಪ್ರೀಂ ಕೋರ್ಟ್ಗೆ ಕಟ್ಲೆ ಹಾಕಿಸಿದ್ದವರು ಬಿಜೆಪಿ. ಬಿಜೆಪಿ ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಮೀಸಲಾತಿಯನ್ನು ವಿರೋಧಿಸಿ ಚಳುವಳಿ ನಡೆಸಿದೆ ಎಂದು ಕಿಡಿಕಾರಿದ್ದಾರೆ.

ಮಾಜಿ ಪ್ರಧಾನಿ ವಿ.ಪಿ.ಸಿಂಗ್ (V P Singh) ಅವರು ಮಂಡಲ್ ವರದಿ ಜಾರಿಗೊಳಿಸಿದ್ದಾಗ ಅಮಾಯಕ ವಿದ್ಯಾರ್ಥಿಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರಕ್ಕೆ ಪ್ರಚೋದಿಸಿದ್ದವರು ಬಿಜೆಪಿ, ಮಂಡಲ್ ವರದಿಗೆ ವಿರುದ್ಧವಾಗಿ ಕಮಂಡಲ ಚಳವಳಿಗೆ ಚಾಲನೆ ನೀಡಿ ಜನರ ತಲೆಯಲ್ಲಿ ಧರ್ಮದ ಅಫೀಮು ತುಂಬುವ ಪ್ರಯತ್ನ ಬಿಜೆಪಿ ಮಾಡಿತ್ತು. ಕೋಮುವಾದದ ಗುರಿ ಕೇವಲ ಅಲ್ಪಸಂಖ್ಯಾತರಲ್ಲ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಶವೂ ಅದರ ಗುರಿಯಾಗಿದೆ. ಮೀಸಲಾತಿ ಫಲಾನುಭವಿಗಳಲ್ಲಿನ್ನು ಜಾಗೃತಿಯಿಂದಾಗಿ ಮೀಸಲಾತಿಯನ್ನು ನೇರವಾಗಿ ವಿರೋಧಿಸುವ ದಮ್ಮು-ತಾಕತ್ತು ಇಂದಿನ ಬಿಜೆಪಿ ನಾಯಕರಿಗೆ ಇಲ್ಲ. ಇದಕ್ಕಾಗಿ ಒಂದೆಡೆ ಮೀಸಲಾತಿಗೆ ಕಾನೂನಿನ ರಕ್ಷಣೆ ನೀಡಿರುವ ಸಂವಿಧಾನವನ್ನೇ ಬದಲಾಯಿಸುವ ಪ್ರಯತ್ನ ಮಾಡಿದರೆ ಇನ್ನೊಂದೆಡೆ ಮೀಸಲಾತಿ ಫಲಾನುಭವಿಗಳ ನಡುವೆಯೆ ಅಂತಃಕಲಹ ಏರ್ಪಡಿಸಿ ಸಾಮಾಜಿಕ ನ್ಯಾಯದ ಅಸ್ತ್ರವನ್ನು ಮೊಂಡಾಗಿಸುವ ಪ್ರಯತ್ನ ಮಾಡುತ್ತಿದೆ ಎಂದರು.ಇದನ್ನೂ ಓದಿ: ಯಡಿಯೂರಪ್ಪ, ಅವರ ಮಕ್ಕಳು ಬಿಜೆಪಿಗೆ ದ್ರೋಹ ಮಾಡಿದ್ರು: ಈಶ್ವರಪ್ಪ ಗುಡುಗು

ಮೀಸಲಾತಿಯ ಫಲಾನುಭವಿಗಳಾದ ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಸಮುದಾಯ ಇಂದು ಜಾಗೃತವಾಗಿದೆ. ಯಾರು ತಮ್ಮ ಶತ್ರುಗಳು ಮತ್ತು ಮಿತ್ರರು ಎನ್ನುವುದನ್ನು ಅವರು ಅರಿತುಕೊಂಡಿದ್ದಾರೆ. ಮೀಸಲಾತಿ ವಿರೋಧವನ್ನು ಅಂತರ್ಯದಲ್ಲಿ ಅಡಗಿಸಿಕೊಂಡು ಬಹಿರಂಗವಾಗಿ ಮೀಸಲಾತಿ ಪರ ಘೋಷಣೆ ಕೂಗಿದರೆ ನಂಬುವಷ್ಟು ನಮ್ಮ ಜನ ದಡ್ಡರಲ್ಲ ಎಂದು ತಿಳಿಸಿದರು.

ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದಾನದ ಅವಕಾಶಗಳನ್ನು ಕಾಲಕಾಲಕ್ಕೆ ಹೇಗೆ ಬಿಜೆಪಿ ಮತ್ತು ಸಂಘ ಪರಿಹಾರವನ್ನು ಚಿವುಟಿಹಾಕಿದೆ ಎನ್ನುವುದನ್ನು ನಮ್ಮ ಜನ ನೋಡಿ, ಅನುಭವಿಸಿ ತಿಳಿದುಕೊಂಡಿದ್ದಾರೆ. ನಿಮ್ಮ ಹುಸಿ ಸಾಮಾಜಿಕ ನ್ಯಾಯದ ಘೋಷಣೆಗೆ ಅವರು ಮರುಳಾಗುವವರಲ್ಲ. ಸಮಾನ ಅವಕಾಶ ಸಿಕ್ಕಿದೆಯೇ, ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲಿಕ್ಕಾಗಿಯೇ ಸುಪ್ರೀಂ ಕೋರ್ಟ್ ಜಾತಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕೆಂದು ಹೇಳಿತ್ತು. ಅದನ್ನು ನಮ್ಮ ಸರ್ಕಾರ ಕರ್ನಾಟಕದಲ್ಲಿ ಮಾಡಿ ತೋರಿಸಿದೆ. ಬಿಜೆಪಿ ನಾಯಕರಿಗೆ ಮತ್ತು ಕೇಂದ್ರದಲ್ಲಿರುವ ಅವರ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಮೊದಲು ಜಾತಿಗಣತಿಯನ್ನು ಶೀಘ್ರವಾಗಿ ದೇಶಾದ್ಯಂತ ನಡೆಸಿ ಮುಗಿಸಲಿ ಎಂದು ಭವಿಷ್ಯ ನುಡಿದಿದ್ದಾರೆ.

ಮೀಸಲಾತಿ ಸಮಾಜದ ಕಟ್ಟಕಡೆಯ ಮನುಷ್ಯನನ್ನು ತಲುಪಿದೆಯೇ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ಇದು ಅವಶ್ಯಕವಾಗಿದೆ. ಮೀಸಲಾತಿ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ನಮ್ಮ ನಾಯಕ ರಾಹುಲ್ ಗಾಂಧಿಯವರು ಬಹಿರಂಗ ಸಭೆಗಳಲ್ಲಿ ಮಾತ್ರವಲ್ಲ ಲೋಕಸಭೆಯಲ್ಲಿಯೂ ಹೇಳಿದ್ದಾರೆ. ಬಿಜೆಪಿ ನಾಯಕರಿಗೆ ಮೀಸಲಾತಿ ಬಗ್ಗೆ ಅಷ್ಟೊಂದು ಕಾಳಜಿ-ಬದ್ಧತೆ ಇದ್ದರೆ ಮೀಸಲಾತಿಯ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಅಂತ ತಿರುಗೇಟು ನೀಡಿದ್ದಾರೆ.

TAGGED:bjpcm siddaramaiahcongressRahul Gandhireservationಕಾಂಗ್ರೆಸ್ಬಿಜೆಪಿಮೀಸಲಾತಿರಾಹುಲ್ ಗಾಂಧಿಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
7 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
16 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
51 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?