ಚಿಕ್ಕೋಡಿ: 1 ವರ್ಷ, 10 ತಿಂಗಳ ಹಿಂದೆ ನಡೆದಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ (Gram Panchayat Election) ಪರಾಭವಗೊಂಡು ಮರು ಮತ ಎಣಿಕೆಗೆ (Recounting) ಕೋರ್ಟ್ (Court) ಮೆಟ್ಟಿಲೇರಿದ್ದ ಅಭ್ಯರ್ಥಿಗೆ ಮತ್ತೆ ಮುಖಭಂಗವಾಗಿದೆ.
ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಸರಿಯಾಗಿ ಆಗಿಲ್ಲ ಎಂದು ಕೋರ್ಟ್ ಮೊರೆ ಹೋಗಿದ್ದ ಪರಾಜಿತ ಅಭ್ಯರ್ಥಿ ರಾವಸಾಹೇಬ್ ಪಾಟೀಲ್ ಅವರು ನ್ಯಾಯಾಲಯದಲ್ಲಿ ನಡೆದ ಮರು ಮತ ಎಣಿಕೆಯಲ್ಲೂ ಸೋಲು ಅನುಭವಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಕುಂಟಿಕೊಂಡು ಏನ್ ಮಾಡ್ತಾರೆ, ಬಿಎಸ್‍ವೈಗೆ ನೆನಪಿನ ಶಕ್ತಿಯೇ ಇಲ್ಲ: ಮೊಯ್ಲಿ ಲೇವಡಿ
Advertisement
Advertisement
2020 ರ ಡಿಸೆಂಬರ್ 30 ರಂದು ನಡೆದಿದ್ದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮತ ಎಣಿಕೆ ಸರಿಯಾಗಿಲ್ಲ ಎಂದು ಆರೋಪಿಸಿ ಅಭ್ಯರ್ಥಿ ರಾವಸಾಹೇಬ್ ಸಂಕೇಶ್ವರದ ಜೆಎಂಎಫ್‌ಸಿ ಕೋರ್ಟ್ ಮೊರೆ ಹೋಗಿದ್ದರು. 505 ಮತ ಪಡೆದು ಪರಾಭವಗೊಂಡಿದ್ದ ರಾವಸಾಹೇಬ್ ಪಾಟೀಲ್ ವಿರುದ್ಧ 506 ಮತ ಪಡೆದು ತವನಪ್ಪ ಹೊಸೂರ ಎಂಬ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಅರ್ಕಾವತಿ ನದಿಯಲ್ಲಿ ಅಪರಿಚಿತ ಕಾರ್ ಪತ್ತೆ – ಮಾಲೀಕರಿಗಾಗಿ ತಲಾಶ್
Advertisement
ಇಂದು ಸಂಕೇಶ್ವರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಡ್ಜ್ ಹಾಗೂ ಹುಕ್ಕೇರಿ ತಹಶೀಲ್ದಾರ ಡಾ. ದೊಡ್ಡಪ್ಪ ಹೂಗಾರ ಸಮ್ಮುಖದಲ್ಲಿ ಮತ್ತೊಮ್ಮೆ ಮರು ಮತ ಎಣಿಕೆ ನಡೆಯಿತು. ಮರು ಮತ ಎಣಿಕೆಯಲ್ಲೂ ಸಹ ತವನಪ್ಪ ಹೊಸುರ ಜಯಶಾಲಿಯಾಗಿದ್ದಾರೆ.