ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ನಾಪತ್ತೆಯಾಗಿದ್ದಾರೆ.
ಸೋಮವಾರ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿಯಾಗಿ ಎಲ್ ಚಂದ್ರಶೇಖರ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ನಾಯಕರ ಪ್ರಚಾರ ಕಾರ್ಯಕ್ರಮ ಬಿರುಸಾಗುವುದು ಸಹಜ. ಆದರೆ ಮಂಗಳವಾರ ಅನಿತಾ ಕುಮಾರಸ್ವಾಮಿ ಮತ್ತು ಚಂದ್ರಶೇಖರ್ ಪ್ರಚಾರಕ್ಕೆ ಇಳಿದಿಲ್ಲ.
ಮಂಗಳವಾರ ಅಶುಭ ಎನ್ನುವ ನಂಬಿಕೆಯಿದೆ. ಹೀಗಾಗಿ ನಾಮಪತ್ರ ಸಲ್ಲಿಕೆ ಮಾಡಿ ಮಂಗಳವಾರ ಪ್ರಚಾರ ಮಾಡಿದರೆ ಅಶುಭವಾಗುತ್ತದೆ ಎನ್ನುವ ಕಾರಣಕ್ಕೆ ಅಭ್ಯರ್ಥಿಗಳು ಪ್ರಚಾರಕ್ಕೆ ಮುಂದಾಗಿಲ್ಲವೇ ಎನ್ನುವ ಪ್ರಶ್ನೆ ಎದ್ದಿದೆ.
ಬಿಜೆಪಿ ಕಳೆದ ಶುಕ್ರವಾರವೇ ಅಧಿಕೃತವಾಗಿ ಪ್ರಚಾರ ಆರಂಭಿಸಿತ್ತು. ಸೋಮವಾರ ನಾಮಪತ್ರ ಸಲ್ಲಿಸಿ ಜೆಡಿಎಸ್ ಅಧಿಕೃತವಾಗಿ ಪ್ರಚಾರ ಆರಂಭಿಸಿತ್ತು. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಬುಧವಾರದಿಂದ ಎರಡು ಪಕ್ಷ ಪ್ರಚಾರ ನಡೆಸುವ ಸಾಧ್ಯತೆಯಿದೆ. ಜೆಡಿಎಸ್-ಕಾಂಗ್ರೆಸ್ ಭಿನ್ನಮತ ಶಮನಕ್ಕಾದ್ರೂ ಅನಿತಾ ಕುಮಾರಸ್ವಾಮಿ ರಾಮನಗರಕ್ಕೆ ಬರಬೇಕಿತ್ತು ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv