ದಾವಣಗೆರೆ: ಜಿಲ್ಲಾಸ್ಪತ್ರೆಯ ವೈದ್ಯ ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿದ್ಯಾರ್ಥಿಗಳು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ರಾಜ್ಯ ಸರ್ಕಾರ 8 ತಿಂಗಳ ಶಿಷ್ಯ ವೇತನವನ್ನು ನೀಡದ್ದರಿಂದ ಕಳೆದ ಎರಡು ದಿನಗಳಿಂದ 235 ವೈದ್ಯ ವಿದ್ಯಾರ್ಥಿಗಳು ನಗರದ ಚಿಗಟೇರಿ ಜಿಲ್ಲಾಸ್ಪತ್ರೆ ಮುಂಭಾಗ ಪೆಂಡಲ್ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಇದಕ್ಕೂ ನಮಗೂ, ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತುಕೊಂಡಿದೆ.
ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳು ಇಂದು ಕ್ಯಾಂಡಲ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ನಗರದ ಪ್ರಮುಖ ಬೀದಿಗಳಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆಯನ್ನು ನಡೆಸಿದವು. ಕೂಡಲೇ ಸರ್ಕಾರ ಸಮಸ್ಯೆಯನ್ನು ಬಗೆಹರಿಸಿ, ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡುವವರೆಗೂ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲವೆಂದು ಇದೇ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv