ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ (Snacks Packet) ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು (Belagavi Police) ಬಂಧಿಸಿದ್ದಾರೆ.
ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಈ ಘಟನೆ ನಡೆದಿದೆ. ಭೋಲು ಪ್ರಜಾಪತಿ ಎಂಬಾತ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ 54 ಸಾವಿರ ರೂಪಾಯಿ ಮೌಲ್ಯದ 6 ಕೆಜಿ ಗಾಂಜಾ, ಒಂದು ಫೋನ್ ಹಾಗೂ ಸ್ಕೂಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಇದ್ನನೂ ಓದಿ PUBLiC TV Impact | ಕೆಎಎಸ್ ಪರೀಕ್ಷೆಯಲ್ಲಿ 25 ಮಾರ್ಕ್ಸ್‌ಗೆ 1.5 ಕೋಟಿ ಡಿಮ್ಯಾಂಡ್ ಆರೋಪ – FIR ದಾಖಲು
ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 94 ಸಾವಿರ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದ್ನನೂ ಓದಿ: ಕೊಪ್ಪಳದಲ್ಲಿ ಗೃಹಲಕ್ಷ್ಮೀ ಗೋಲ್ಮಾಲ್ ಬಯಲು – ಸತ್ತವರ ಅಕೌಂಟ್‌ಗೆ ಜಮೆಯಾಗಿದ್ದ 86 ಲಕ್ಷ ಹಣ ರಿಕವರಿ



