ನವದೆಹಲಿ: ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ (Tamil Nadu Governor RN Ravi) ಅವರು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮಸೂದೆಗಳಿಗೆ ಒಪ್ಪಿಗೆ ನೀಡದೇ ತಡೆಹಿಡಿದಿರುವ ಕ್ರಮಕ್ಕೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯಪಾಲರ ಈ ನಡೆ ಸಂವಿಧಾನದ ಉಲ್ಲಂಘನೆಯಾಗಿದ್ದು, ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವಂತಿಲ್ಲ ಎಂದು ಆದೇಶಿಸಿದೆ.
ತಮಿಳುನಾಡು ಸರ್ಕಾರವು (Tamil Nadu Government) ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ರಾಜ್ಯಪಾಲ ಆರ್.ಎನ್ ರವಿ ಅವರು ಹತ್ತು ಮಸೂದೆಗಳನ್ನು ಒಪ್ಪಿಗೆಗಾಗಿ ತಡೆಹಿಡಿದಿದ್ದರು, ಇದರಲ್ಲಿ ಶಿಕ್ಷಣ, ಆಡಳಿತ ಸುಧಾರಣೆ ಮತ್ತು ಸ್ಥಳೀಯ ಆರೋಗ್ಯ ಕಾಯ್ದೆಗಳು ಸೇರಿದ್ದವು. ಈ ಮಸೂದೆಗಳನ್ನು ವಿಧಾನಸಭೆಯಲ್ಲಿ ಮರು ಅಂಗೀಕರಿಸಿದ ನಂತರವೂ ರಾಜ್ಯಪಾಲರು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ್ದು ಇವುಗಳನ್ನು ಅನುಮೋದಿಸಿಲ್ಲ ಎಂದು ಆರೋಪಿಸಿ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಯಾರ ಒತ್ತಡ ಅನ್ನೋದು ಗೊತ್ತಿಲ್ಲ: ಪರಮೇಶ್ವರ್
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ಫೆಬ್ರವರಿ 10 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಈ ಸಂಬಂಧ ತೀರ್ಪು ನೀಡುತ್ತಾ, ರಾಜ್ಯಪಾಲರು ಸಂವಿಧಾನದ 200ನೇ ವಿಧಿಯಡಿ ರಾಜ್ಯ ಸರ್ಕಾರದ ಸಲಹೆಗೆ ಬದ್ಧರಾಗಿರಬೇಕು. ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವ ಅಧಿಕಾರ ಅವರಿಗಿಲ್ಲ ಅವರ ನಡೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿತು. ಇದನ್ನೂ ಓದಿ: ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ
ರಾಜ್ಯಪಾಲರು ಮಸೂದೆಯನ್ನು ವೀಟೋ ಮಾಡಲು ಅಥವಾ ಪಾಕೆಟ್ ವೀಟೋ ಮಾಡಲು ಸಾಧ್ಯವಿಲ್ಲ, ಮಸೂದೆಗಳನ್ನು ಸೀಟಿನ ಕೆಳಗಿಟ್ಟುಕೊಂಡು ಕೂರುವಂತಿಲ್ಲ. ರಾಜ್ಯಪಾಲರು ಮಸೂದೆಯನ್ನು ಅನುಮೋದಿಸಬಹುದು ಅಥವಾ ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಬಹುದು. ರಾಜ್ಯಪಾಲರು ಮಸೂದೆಯನ್ನು 2ನೇ ಬಾರಿಗೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಳುಹಿಸುವಂತೆ ಕೇಳುವ ಮೂಲಕ ಅದನ್ನು ತಡೆಯಲು ಸಾಧ್ಯವಿಲ್ಲ. ರಾಜ್ಯಪಾಲರು 2ನೇ ಬಾರಿಗೆ ಮಸೂದೆಯನ್ನು ಅನುಮೋದಿಸಬೇಕು, ಆದರೆ ಎರಡನೇ ಮಸೂದೆಯು ಮೊದಲನೆಯದಕ್ಕಿಂತ ಭಿನ್ನವಾಗಿರಬೇಕು ಎಂದು ಕೋರ್ಟ್ ಹೇಳಿದೆ. ಅದನ್ನು ಮೂರು ತಿಂಗಳೊಳಗೆ ಅನುಮೋದಿಸಬೇಕು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಬಿಡದಿಯಲ್ಲಿ ವಿಮಾನ ನಿಲ್ದಾಣ ಮಾಡ್ತಿಲ್ಲ, ಅಲ್ಲಿ ಶಿವಕುಮಾರ್ ಲೇಔಟ್ ಮಾಡ್ತಿದ್ದಾರೆ: ಎಂ.ಬಿ.ಪಾಟೀಲ್
ಸುಪ್ರೀಂ ಕೋರ್ಟ್ ಆದೇಶವನ್ನ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸ್ವಾಗತಿಸಿದ್ದು, ಇದು ರಾಜ್ಯ ಸರ್ಕಾರಗಳ ಸ್ವಾಯತ್ತತೆ ಮತ್ತು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಗೆಲುವು. ರಾಜ್ಯಪಾಲರ ಸಂವಿಧಾನ ವಿರೋಧಿ ಕ್ರಮಗಳಿಗೆ ತಡೆಯೊಡ್ಡಲಾಗಿದೆ ಎಂದು ಹೇಳಿದ್ದಾರೆ. ರಾಜ್ಯಪಾಲರು ರಾಜ್ಯ ಸರ್ಕಾರದ ದೈನಂದಿನ ಆಡಳಿತಕ್ಕೆ ಅಡ್ಡಿಯಾಗುತ್ತಿದ್ದಾರೆ ಎಂಬ ಆರೋಪವು ಈಗ ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ