ಬೆಂಗಳೂರು: ಸದ್ಯ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ.
ನ್ಯಾಯಾಲಯ ಸೂಚನೆ ಮೇರೆಗೆ ಮಾಹಿತಿ ನೀಡಿರುವ ಕರ್ನಾಟಕ ಸರ್ಕಾರ ಈಗಾಗಲೇ ನಿಗಧಿ ಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ 16.66 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಮಾಣಪತ್ರ ಸಲ್ಲಿಸಿದೆ.
Advertisement
Advertisement
ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಸ್ಕೀಂ ರೂಪಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಮೇ 3ರಂದು ವಿಚಾರಣೆ ನಡೆಸಿದ ಕೋರ್ಟ್ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಮಿಳುನಾಡಿಗೆ ಬಿಡಬೇಕಾಗಿದ್ದ 4 ಟಿಎಂಸಿ ನೀರನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇದುವರೆಗೂ ತಮಿಳುನಾಡಿಗೆ ಹರಿಸಿದ ನೀರಿನ ಪ್ರಮಾಣ, ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಮಾಹಿತಿ ನೀಡಲು ಕರ್ನಾಟಕ್ಕೆ ಸೂಚಿಸಿ ಮೇ 8ಕ್ಕೆ ವಿಚಾರಣೆ ಮುಂದೂಡಿತ್ತು.