ಕೋಲ್ಕತ್ತಾ: ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಹೊತ್ತಿನಲ್ಲೇ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಪ್ರಾಂಶುಪಾಲ (RG Kar Medical College Principal) ಡಾ.ಸಂದೀಪ್ ಘೋಷ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಅತ್ಯಾಚಾರ ಪ್ರಕರಣದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ (Social Media) ನನ್ನ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಈ ಅವಮಾನ ನನ್ನಿಂದ ಸಹಿಸಲಾಗುತ್ತಿಲ್ಲ ಎಂದು ಹೇಳಿ ಘೋಷ್ (Dr. Sandip Ghosh) ರಾಜೀನಾಮೆ ಘೋಷಿಸಿದ್ದಾರೆ. ಇದನ್ನೂ ಓದಿ: ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು
Advertisement
Advertisement
ನನ್ನಿಂದ ರಾಜೀನಾಮೆ ಪಡೆಯಲು ವಿದ್ಯಾರ್ಥಿಗಳನ್ನ (Medical Student) ಎತ್ತಿಕಟ್ಟಿದ್ದಾರೆ. ಸುಮ್ಮನೆ ನನ್ನ ಮಾನಹಾನಿ ಮಾಡಲಾಗುತ್ತಿದೆ. ನಾನು ಸಂತ್ರಸ್ತರನ್ನ ನೋಯಿಸುವ ಯಾವುದೇ ಟೀಕೆ ಮಾಡಿಲ್ಲ. ಅತ್ಯಾಚಾರ ಮತ್ತು ಕೊಲೆ ಆರೋಪಿಗೆ ಶಿಕ್ಷೆ ಆಗಬೇಕೆಂದು ಈಗಲೂ ಬಯಸುತ್ತೇನೆ. ಮೃತ ಬಾಲಕಿ ನನ್ನ ಮಗಳಿದ್ದಂತೆ, ನನಗೂ ತಂದೆ-ತಾಯಿ ಇದ್ದಾರೆ. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ನನ್ನ ವಿರುದ್ಧ ನೀಡುತ್ತಿರುವ ಕೀಳು ಮಟ್ಟದ ಹೇಳಿಕೆಗಳಿಂದ ತುಂಬಾ ನೋವಾಗುತ್ತಿದೆ. ಆದ್ದರಿಂದ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಪತ್ರದಲ್ಲಿ ಬರೆದಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!
Advertisement
Advertisement
ಕೃತ್ಯದ ನಂತರ ಸಂದೀಪ್ ರಾಜೀನಾಮೆ ನೀಡಲ್ಲ ಅಂತ ಎಲ್ಲರೂ ಹೇಳ್ತಿದ್ದರು. ಆದ್ರೆ ನಾನು ಪ್ರಾಮಾಣಿಕನಾಗಿ ರಾಜೀನಾಮೆ ನೀಡಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ಬಳಿಕ ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದೆ. ಆಸ್ಪತ್ರೆಯ ಅಭಿವೃದ್ಧಿ ಮತ್ತು ರೋಗಿಗಳ ಹಿತದೃಷ್ಟಿಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದ್ರೆ ಈ ಘಟನೆಯನ್ನು ಕೆಲವರು ಲಾಭಕ್ಕಾಗಿ ಬಳಸಿಕೊಂಡಿದ್ದು, ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಏನಿದು ಪ್ರಕರಣ?
ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ತರಬೇತಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಲೆ ಮಾಡಿರುವುದು ವರದಿಯಲ್ಲಿ ಬಹಿರಂಗವಾಯಿತು. ಇದನ್ನೂ ಓದಿ: ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್ ಸಿಂಗ್
ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ:
ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್ ವೀಡಿಯೋಗಳು ಪತ್ತೆ!