ಬಾಗಲಕೋಟೆ: ಕ್ಯಾಂಟರ್ಗೆ ಅಪರಿಚಿವ ವಾಹನ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬದಾಮಿ ತಾಲೂಕಿನ ಕೆರೂರು ಪಟ್ಟಣದ ಬಳಿ ಹುಬ್ಬಳ್ಳಿ-ವಿಜಯಪುರ ರಸ್ತೆಯಲ್ಲಿ ನಡೆದಿದೆ.
ಕ್ಯಾಂಟರ್ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಕ್ಯಾಂಟರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತಕ್ಕೊಳಗಾದ ಕ್ಯಾಂಟರ್ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರದ್ದು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.