-ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರ್ಘಟನೆ
ಹಾವೇರಿ: ಆಟೋಗೆ (Auto) ಕ್ಯಾಂಟರ್ (Canter) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು (Ranebennur) ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಯಶೋಧ ಮತ್ತು ಬಸಮ್ಮ ಎಂದು ಗುರುತಿಸಲಾಗಿದೆ. ಯಶೋಧ ಮತ್ತು ಬಸಮ್ಮ ಸೇರಿದಂತೆ ಒಟ್ಟು ಎಂಟು ಜನರು ದಾವಣಗೆರೆಯಿಂದ ಚಳಗೇರಿ ಗ್ರಾಮಕ್ಕೆ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಬಂದಿದ್ದರು. ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಜವರಾಯನಾಗಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ದರ್ಶನ್‌ಗಾಗಿ ಬಟ್ಟೆ, ಡ್ರೈಪ್ರೂಟ್ಸ್ ತಂದ ವಿಜಯಲಕ್ಷ್ಮಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ದರ್ಶನ್‌ಗೆ ಅಭಯ
ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಇಂಜಿನ್ ಆಗಸದಲ್ಲೇ ವೈಫಲ್ಯ – ಕೋಲ್ಕತ್ತಾ ಏರ್‌ಪೋರ್ಟಲ್ಲಿ ಎಮರ್ಜೆನ್ಸಿ, ಸೇಫ್ ಲ್ಯಾಂಡಿಂಗ್