ಬೈಕ್‌ಗೆ ಕ್ಯಾಂಟರ್ ಡಿಕ್ಕಿ – ಹಿಟ್ ಅಂಡ್ ರನ್‌ಗೆ ನಿವೃತ್ತ ಪೊಲೀಸ್ ಬಲಿ

Public TV
1 Min Read
Anekal Accident

ಆನೇಕಲ್: ಆಕ್ಟಿವಾ ಬೈಕ್‌ಗೆ ಕ್ಯಾಂಟರ್ (Cantor) ಡಿಕ್ಕಿ ಹೊಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ಹೊರವಲಯದ ಅತ್ತಿಬೆಲೆಯ (Attibele) ಟಿವಿಎಸ್ ಕ್ರಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರಿನ (Bengaluru) ಆಡುಗೋಡಿ (Adugodi) ಮೂಲದ ನಿವೃತ್ತ ಎಎಸ್‌ಐ ಪ್ರಕಾಶ್ (61) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು: ಛಲವಾದಿ ಕಿಡಿ

ಟಿವಿಎಸ್ ಕ್ರಾಸ್ ಬಳಿ ಆಕ್ಟಿವಾ ಬೈಕ್‌ನಲ್ಲಿ ಪ್ರಕಾಶ್ ತೆರಳುತ್ತಿದ್ದರು. ಈ ವೇಳೆ ಧರ್ಮಪುರಿಯಿಂದ ಮಂಗಳೂರಿಗೆ ಹೊರಟಿದ್ದ ಕ್ಯಾಂಟರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾಂಟರ್‌ಗೆ ಸಿಲುಕಿ ಪ್ರಕಾಶ್ ದೇಹ ಛಿದ್ರ ಛಿದ್ರಗೊಂಡಿದೆ. ಅಪಘಾತ ಸಂಭವಿಸಿದ ಬಳಿಕ ಕ್ಯಾಂಟರ್ ಚಾಲಕ ದಿನೇಶ್ ಪಾರಾಗಲು ಯತ್ನಿಸಿದ್ದು, ಪೊಲೀಸರು ಚಾಲಕ ಹಾಗೂ ಕ್ಯಾಂಟರ್‌ನ್ನು ವಶಕ್ಕೆ ಪಡೆದಿದ್ದಾರೆ.

ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಜಾಗತಿಕ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡೋಣ – ಟ್ರಂಪ್‌ಗೆ ಮೋದಿ ಅಭಿನಂದನೆ

Share This Article