ಚಂಡೀಗಢ: ಪಂಜಾಬ್‍ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸುಧೀರ್ಘ 1ಗಂಟೆಗಳ ಮಾತುಕತೆ ನಡೆಸಿದ್ದಾರೆ.
ಪಂಜಾಬ್ ಕಾಂಗ್ರೆಸ್‍ನಲ್ಲಿ ಮಹತ್ವದ ಬೆಳವಣಿಗೆಯ ನಡುವೆ ಮುಖ್ಯಮಂತ್ರಿಯಾಗಿದ್ದ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಬಳಿಕ ಚರಣ್‍ಜಿತ್ ಸಿಂಗ್ ಛನ್ನಿ ನೂತನ ಸಿಎಂ ಆಗಿ ಪಂಜಾಬ್‍ನಲ್ಲಿ ಆಡಳಿತ ನಡೆಸುತ್ತಿದ್ದಾರೆ. ಈ ನಡುವೆ ಕೆಲದಿನಗಳಿಂದ ಅಮರೀಂದರ್ ಸಿಂಗ್ ಪಂಜಾಬ್ ಕಾಂಗ್ರೆಸ್‍ನಿಂದ ಹೊರ ಬಂದು ಬಿಜೆಪಿ ಪಕ್ಷ ಸೇರಲು ಬಯಸಿದ್ದಾರೆ ಎಂಬ ವದಂತಿ ಹರಡಿತ್ತು. ಇದೀಗ ಈ ವದಂತಿಗೆ ಪುಷ್ಠಿ ನೀಡುವಂತೆ, ಅಮಿತ್ ಶಾ ಅವರನ್ನು ಭೇಟಿ ಆಗಿರುವುದು ಕೂತುಹಲ ಮೂಡಿಸಿದೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ನೂತನ ಸಚಿವ ಸಂಪುಟ ರಚನೆ ಕಸರತ್ತು- ಐವರು ಹಳೆ ಸಚಿವರಿಗೆ ಕೊಕ್
Advertisement
Advertisement
ಪಂಜಾಬ್ ಕಾಂಗ್ರೆಸ್‍ನಲ್ಲಿ ಕೆಲದಿನಗಳಿಂದ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ಮುಂದುವರಿದಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ಬೆನ್ನಲ್ಲೇ ಹಲವು ಶಾಸಕರು ಸಿಧು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜೀನಾಮೆ ಬಳಿಕ ಮೊದಲ ಬಾರಿಗೆ ಮೌನಮುರಿದ ಸಿಧು, ನಾನು ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ. ಹೈಕಮಾಂಡ್ ಹೆದರಿಸುವ ಪ್ರಯತ್ನ ಮಾಡಿಲ್ಲ. ಯಾವುದೇ ರಾಜೀ ಇಲ್ಲದೇ ಪಂಜಾಬ್ ಹಿತಾಸಕ್ತಿಗಾಗಿ ಕೆಲಸ ಮಾಡ್ತೇನೆ ಎಂದಿದ್ದಾರೆ.
Advertisement
#WATCH | Former Punjab CM and Congress leader Captain Amarinder Singh reaches the residence of Union Home Minister Amit Shah in New Delhi pic.twitter.com/787frIaou7
— ANI (@ANI) September 29, 2021
Advertisement
ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಛನ್ನಿ ಈ ಬಗ್ಗೆ ಮಾತನಾಡಿ, ಸಿಧು ಅವರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಪಕ್ಷದಲ್ಲಿ ಅವರೇ ಪರಮೋಚ್ಛ. ಶೀಘ್ರವೇ ಎಲ್ಲ ಬಿಕ್ಕಟ್ಟು ಬಗೆಹರಿಯಲಿದೆ ಎಂದರು. ಈ ಬೆಳವಣಿಗೆಗಳ ನಡುವೆ ಎಎಪಿ ಸಕ್ರಿಯವಾಗಿದ್ದು, ಮುಂದಿನ ವಿಧಾನ ಸಭೆ ಚುನಾವಣೆಯನ್ನು ಎದುರಿಸಲು ಸಜ್ಜುಗೊಳ್ಳುತ್ತಿದೆ. ನಾಳೆ ಪಂಜಾಬ್ ಸಿಎಂ ಅಭ್ಯರ್ಥಿ ಹೆಸರನ್ನು ಘೋಷಿಸಲು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್