ಹಾಸನ: ಕಾಡಾನೆ (Wild Elephant) ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಕ್ಯಾಪ್ಟನ್ ಅರ್ಜುನ (Arjuna) ಸಾವನ್ನಪ್ಪಿದ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ (Sakleshpura) ತಾಲೂಕಿನ ಯಸಳೂರು ಬಳಿ ನಡೆದಿದೆ.
ನಾಲ್ಕು ಸಾಕಾನೆಗಳೊಂದಿಗೆ ಇಂದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿಪಿವೈ ಬಾವ ಮಹದೇವಯ್ಯ ಶವ ಪತ್ತೆ
Advertisement
ಸಾಕಾನೆ ಅರ್ಜುನ ಒಂಟಿಸಲಗದ ಜೊತೆ ಕಾಳಗಕ್ಕಿಳಿದಿದೆ. ಮದಗಜಗಳ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದೆ. ಎರಡು ಆನೆಗಳು ಕಾಳಗಕ್ಕೆ ಬೀಳುತ್ತಿದ್ದಂತೆ ಮಾವುತರು ಅರ್ಜುನನ ಮೇಲಿನಿಂದ ಇಳಿದು ಓಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಳ್ಳತನಕ್ಕೆ ಬಂದು ಹಣ, ಬಂಗಾರ ದೋಚಿದ್ದಲ್ಲದೇ ಊಟ ಮಾಡಿ ಹೋದ ಕಳ್ಳರು!
Advertisement
Advertisement
ಕ್ಯಾಪ್ಟನ್ ಅರ್ಜುನ ದಸರಾ ವೇಳೆ ಎಂಟು ಬಾರಿ ಅಂಬಾರಿ ಹೊತ್ತಿದ್ದು, ಜನರ ಪ್ರೀತಿಗೆ ಪಾತ್ರರಾಗಿತ್ತು. ಇಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಬಲಿಯಾಗಿದೆ. ಕಾಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಭಾರೀ ದುರಂತ ನಡೆದಿದ್ದು, ಕಾಡಾನೆ ದಾಳಿಗೆ ಪಳಗಿದ ಆನೆ ಅರ್ಜುನ ಸಾವನ್ನಪ್ಪಿದೆ. ಇದನ್ನೂ ಓದಿ: ಕೂಟಿಯಾಲ ಹೊಳೆಯಲ್ಲಿ ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ
Advertisement
ಸಕಲೇಶಪುರ ತಾಲೂಕಿನ ಯಸಳೂರು, ಬಾಳೆಕೆರೆ ಫಾರೆಸ್ಟ್‌ನಲ್ಲಿ ಘಟನೆ ನಡೆದಿದೆ. ಅರ್ಜುನ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಅರಣ್ಯ ಇಲಾಖೆ ಇಂದು ಕಾರ್ಯಾಚರಣೆ ಆರಂಭಿಸಿತ್ತು. ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಸಾಕಾನೆಗಳು ಹಿಮ್ಮೆಟ್ಟಿದೆ. ಇದನ್ನೂ ಓದಿ: ಸಿಂಧನೂರಿನಲ್ಲಿ ಸರಣಿ ಕಳ್ಳತನ – 60 ಮೊಬೈಲ್, ಬೈಕ್, ಲ್ಯಾಪ್‍ಟಾಪ್ ದೋಚಿದ ಕಳ್ಳರು
ಒಂಟಿ ಸಲಗದ ಜೊತೆ ಅರ್ಜುನ ಕಾಳಗಕ್ಕಿಳಿದಿದ್ದು, ಮದಗಜಗಳ ಕಾಳಗದಲ್ಲಿ ಅರ್ಜುನ ವೀರಮರಣ ಹೊಂದಿದೆ. ಅರ್ಜುನ ಆನೆಯ ಹಠಾತ್ ಸಾವಿನಿಂದ ಪ್ರಾಣಿಪ್ರಿಯರಿಗೆ ಶಾಕ್ ಆಗಿದೆ. ಹೊಟ್ಟೆ ಭಾಗದಲ್ಲಿ ತಿವಿತಕ್ಕೆ ಒಳಗಾಗಿ ಕ್ಯಾಪ್ಟನ್ ಅರ್ಜುನ ಕೊನೆಯುಸಿರೆಳೆದಿದೆ. ಮೈಸೂರು ದಸರಾದಲ್ಲಿ ಅರ್ಜುನ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತು ಜನಮನಗೆದ್ದಿತ್ತು. 2012ರಿಂದ 2019 ರವರೆಗೆ ಅಂಬಾರಿ ಹೊತ್ತು ಅರ್ಜುನ ಸೈ ಎನಿಸಿಕೊಂಡಿತ್ತು. ಎಲ್ಲಾ ರೀತಿಯಲ್ಲೂ ಜನರ ಪ್ರೀತಿಗೆ ಪಾತ್ರನಾಗಿದ್ದ ಕ್ಯಾಪ್ಟನ್ ಅರ್ಜುನನ ಹಠಾತ್ ಸಾವು ಕಂಡು ಮಾವುತರು ಕಣ್ಣೀರಾಗಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ವೃದ್ಧನ ಬರ್ಬರ ಹತ್ಯೆ- ದೃಶ್ಯ ಮೊಬೈಲ್‍ನಲ್ಲಿ ಸೆರೆ