– ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಧಾರವಾಡ: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ (Karkala) ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್‍ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
ಮಂಗಳೂರು: ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಬ್ರಿಜೇಶ್ ಚೌಟ ಒತ್ತಾಯ
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ (Captain Brijesh Chowta) ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರರು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ.
ಕರಾವಳಿ ಭಾಗದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದ್ದು, ಇದು ಕಾನೂನು ಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅದರಿಂದ ರಾಷ್ಟ್ರೀಯ ಭದ್ರತೆಗೆ ಆತಂಕ ಸೃಷ್ಟಿಸಿ ಕಾನೂನು ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ಸಂಸತ್ತಿನಲ್ಲಿಯೂ ಮಾತನಾಡಿದ್ದು, ಇದನ್ನು ಮಟ್ಟ ಹಾಕಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದ್ದೆ.
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.