ವಾಷಿಂಗ್ಟನ್: ಅಮೆರಿಕದ (America) ಟೆಕ್ಸಾಸ್‌ನ (Texas) ರಾಂಡೋಲ್ಫ್ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶದ ಮೂವರು ಸೇರಿದಂತೆ ಐವರು ಭಾರತೀಯರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾನೆ. ಟೆಕ್ಸಾಸ್ ಪಬ್ಲಿಕ್ ಸೇಫ್ಟಿ ಅಧಿಕಾರಿಗಳ ಪ್ರಕಾರ, ದಕ್ಷಿಣ ಬನ್‌ಹ್ಯಾಮ್‌ನಿಂದ ದಕ್ಷಿಣಕ್ಕೆ 10 ಕಿಲೋಮೀಟರ್ ದೂರದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಂಜೆ ಸುಮಾರು 6:45ರ ವೇಳೆಗೆ ಘಟನೆ ನಡೆದಿದೆ. ಇದನ್ನೂ ಓದಿ: ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ
ಮೃತ ಐವರಲ್ಲಿ ಮೂವರು ಆಂಧ್ರಪ್ರದೇಶದ (Andhra Pradesh) ಚಿತ್ತೂರು ಜಿಲ್ಲೆಯವರು. ಮೃತರನ್ನು ಗುಡೂರು ಪಟ್ಟಣದ ತಿರುಮುರು ಗೋಪಿ, ಶ್ರೀಕಾಳಹಸ್ತಿಯ ರಜಿನಿ ಶಿವ ಮತ್ತು ಹರಿ ಎಂದು ಗುರುತಿಸಲಾಗಿದೆ. ಹರಿ ಅವರ ಪತಿ ಸಾಯಿ ಚೆನ್ನು ಅವರಿಗೆ ತೀವ್ರ ಗಾಯಗಳಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ
ಆಂಧ್ರಪ್ರದೇಶದ ಶಾಸಕ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಸದಸ್ಯ ಕೊಂಡಪಲ್ಲಿ ಶ್ರೀನಿವಾಸ್ ಅವರು ಈ ಘಟನೆಯ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ – ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ
ಅಮೆರಿಕದಲ್ಲಿ ನೆಲೆಸಿರುವ ತೆಲುಗರು ಅಪಘಾತದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ದೇಶದ ತೆಲುಗು ಸಂಘಟನೆಗಳು ದುರಂತ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿವೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್ ಅನುಮೋದನೆ