ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ, ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ನೈಸ್ ರಸ್ತೆಯ ಒಕ್ಕರಾ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಡೆದದ್ದು ಏನು?
ಸ್ವಿಫ್ಟ್ ಕಾರಿನ ಚಾಲಕ ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದ. ಕಾರು ನೈಸ್ ರಸ್ತೆಯ ಒಕ್ಕರಾ ಸೇತುವೆ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿತ್ತು. ಈ ಕಾರಿನ ಹಿಂದೆ ಬರುತ್ತಿದ್ದ ಮತ್ತೊಂದು ಕಾರಿನ ಚಾಲಕ ರಸ್ತೆ ಮಧ್ಯದಲ್ಲಿಯೇ ತನ್ನ ಕಾರು ನಿಲ್ಲಿಸಿ ಹಳ್ಳಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ಮುಂದಾಗಿದ್ದ. ಆದರೆ ಎದುರಿಗೆ ಬಂದ ಶೆವರ್ಲೆಟ್ ಕಾರು ರಸ್ತೆ ಮಧ್ಯೆ ನಿಂತಿದ್ದ ಕಾರಿಗೆ ಬಲವಾಗಿ ಡಿಕ್ಕಿ ಹೊಡಿದ್ದರಿಂದ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿಯಲು ಆರಂಭಿಸಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Advertisement
ರಸ್ತೆ ಮಧ್ಯದಲ್ಲಿಯೇ ಕಾರು ಹೊತ್ತಿ ಉರಿಯುತ್ತಿದ್ದರಿಂದ ಅನೇಕರು ಘಟನಾ ಸ್ಥಳದಲ್ಲಿ ಸೇರಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು. ಇತ್ತ ಜನರು ಮೊಬೈಲ್ ಟಾರ್ಚ್ ಹಿಡಿದು ಹಳ್ಳಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಕಾರಿಗೆ ಬೆಂಕಿ ಹತ್ತಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv