ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿರುವ ಕಾರಣ ಸರ್ಕಾರ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೋವಾ ಕ್ರಿಸ್ಟಾ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂತ್ರಿ ಮಾಲ್ ಬಳಿ ನಡೆದಿದೆ.
Advertisement
ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ಎರಡು ಏರ್ ಬ್ಯಾಗ್‍ಗಳು ಓಪನ್ ಆಗಿದೆ. ಅಲ್ಲದೇ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮನೆಯ ಹೊರಗೆ ಎಸೆದ – ಆರೋಪಿ ಅರೆಸ್ಟ್
Advertisement
Advertisement
ಇದೀಗ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಈ ಸಂಬಂಧ ಹೈ ಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ ಕಾರಿನಲ್ಲಿ ಮದ್ಯ ಬಾಟಲಿ ಪತ್ತೆಯಾಗಿದ್ದು, ಮದ್ಯ ಸೇವಿಸಿ ಕಾರು ಚಾಲನೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.
Advertisement
ಸದ್ಯ ಇಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಮೆಡಿಕಲ್ ಟೆಸ್ಟ್ ಮಾಡಿಸುತ್ತಿದ್ದಾರೆ. ಈ ವೇಳೆ ಮದ್ಯ ಸೇವನೆ ಮಾಡಿರುವುದು ಕಂಡು ಬಂದರೆ ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮೂಲ ಕಾಂಗ್ರೆಸ್ಸಿಗರ ಟಕ್ಕರ್