ಮಂಡ್ಯ: ಡೆಡ್ಲಿ ಆಕ್ಸಿಡೆಂಟ್‍ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಎರಡ್ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ (Bengaluru–Mysuru Expressway) ನಲ್ಲಿ ನಡೆದಿದೆ.
ಕಾರು ಬೆಂಗಳೂರು (Bengaluru) ಕಡೆಯಿಂದ ಮೈಸೂರಿನತ್ತ ತೆರಳುತ್ತಿತ್ತು. ಭೀಕರ ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್‍ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರಿನಲ್ಲಿದ್ದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ. ಇದನ್ನೂ ಓದಿ: ಬೆಂಗ್ಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು
ಅದೃಷ್ಟವಶಾತ್ ಅಪಘಾತಕ್ಕೀಡಾದ ಕಾರಿನ ಮುಂದೆ-ಹಿಂದೆ ಯಾವುದೇ ವಾಹನ ಸಂಚರಿಸದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ದಶಪಥ ಹೆದ್ದಾರಿಯಿಂದ ಅಪಘಾತದ ಕಾರು ತೆರವು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.