Connect with us

Dharwad

ಕಾರುಗಳು ಮುಖಾಮುಖಿ ಡಿಕ್ಕಿ- ಸ್ಥಳದಲ್ಲೇ ಇಬ್ಬರ ದುರ್ಮರಣ

Published

on

ಹುಬ್ಬಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಭಾರಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಬಲೆನೋ ಕಾರಿನಲ್ಲಿದ್ದವರು.

ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲೆನೋ ಕಾರು, ಗದಗದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳು ಮತ್ತು ಮೃತರನ್ನು ಪತ್ತೆ ಹಚ್ಚಲಾಗುತ್ತಿದೆ.

Click to comment

Leave a Reply

Your email address will not be published. Required fields are marked *