– ದಂಪತಿಗೆ ಗಂಭಿರ ಗಾಯ
ಮಂಡ್ಯ: ಲಾರಿ ಓವರ್‌ಟೇಕ್ ಮಾಡುವ ಬರದಲ್ಲಿ ಕಾರು ಪಲ್ಟಿಯಾದ (Car Accident) ಘಟನೆ ಮಂಡ್ಯದ (Mandya) ಹನಕೆರೆ ಬಳಿಯ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Bengaluru Mysuru Expressway) ನಡೆದಿದೆ. ಅಪಘಾತದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಂಪತಿ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಡಿವೈಡರ್ ದಾಟಿ ಮತ್ತೊಂದು ರಸ್ತೆಗೆ ಕಾರು ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ – ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
ಗಾಯಾಳು ದಂಪತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಕಾರನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ವಾಹನ ತಪಾಸಣೆ ಮಾಡುವಾಗ ಪರಾರಿಗೆ ಯತ್ನ – ಚೇಸಿಂಗ್ ವೇಳೆ ಪೊಲೀಸರ ಕಾರಿಗೆ ಬೈಕ್ ಡಿಕ್ಕಿ
