
ರಾಯಚೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ದಾರುಣವಾಗಿ ಪ್ರಾಣ ಬಿಟ್ಟ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊಲಪಲ್ಲಿಯಲ್ಲಿ ನಡೆದಿದೆ.
Advertisements
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಮರೇಶ್ (30), ಗೋವಿಂದ್ (35) ದೇವರಾಜ್ (34) ಮೃತ ದುರ್ದೈವಿಗಳು. ಇದನ್ನೂ ಓದಿ: ಮಾಂಜ್ರಾನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
Advertisements
ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ವಡಗೇರ ಗ್ರಾಮದವರಾಗಿದ್ದಾರೆ. ಬೆಂಗಳೂರಿನಿಂದ ಮದುವೆಗೆಂದು ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಗಾಯಾಳುಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: KGF-2 ನೋಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಫೈರಿಂಗ್ – ಆರೋಪಿ ಪತ್ತೆಗೆ ಎರಡು ತಂಡ ರಚನೆ
Advertisements
Advertisements