ಅಡ್ಡಾದಿಡ್ಡಿ ಕಾರ್ ಚಲಾಯಿಸಿದ ನಿವೃತ್ತ ಪೊಲೀಸ್ ಅಧಿಕಾರಿ

Public TV
1 Min Read
MNG SP

ಮಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಅವಾಂತರ ಸೃಷ್ಟಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಿವೃತ್ತ ಎಸ್‍ಪಿ ಮಿತ್ರ ಹೆರಾಜೆ ಕಾರು ಚಲಾಯಿಸುತ್ತಾ ಕದ್ರಿಯಿಂದ ಕೆಪಿಟಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ್ದು, ಹಲವು ವಾಹನಗಳಿಗೆ ಡಿಕ್ಕಿಯಾಗಿದ್ದು, ಸ್ಕೂಟರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಕೂಡಲೇ ಆಕ್ರೋಶಗೊಂಡ ಸಾರ್ವಜನಿಕರು ಕಾರಿಗೆ ಮುತ್ತಿಗೆ ಹಾಕಿದ್ದು, ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

mng

ಈ ವೇಳೆ ತಾನು ನಿವೃತ್ತ ಎಸ್‍ಪಿ ಎನ್ನುತ್ತಿದ್ದಂತೆ ಜನ ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಕೂಡಲೇ ಕದ್ರಿ ಮತ್ತು ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಲು ಲಘು ಲಾಠಿ ಬೀಸಿದ್ದಾರೆ. ಮಧ್ಯರಾತ್ರಿ 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಕದ್ರಿಯ ಮನೆಯೊಂದರಲ್ಲಿ ಮೆಹಂದಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕರು ಸ್ಥಳದಲ್ಲಿ ಸೇರಿದ್ದಾರೆ.

ಈ ಕುರಿತು ಕದ್ರಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *