ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಳಿತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಹಾಗೂ ಚಾಲಕ ಸೇರಿ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ.
ಶಿಕ್ಷಕ ಪ್ರಕಾಶ (48), ಶಾಲಿನಿ (10) ಮತ್ತು ಯಶೋಧಾ (8) ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಶೋದಾ ಮತ್ತು ಶಾಲಿನಿ ಜಮೀನಿನಲ್ಲಿ ಕುಳಿತಿದ್ದ ವೇಳೆ ಚಾಲಕ ಪ್ರಕಾಶ್ ಅವರ ನಿಯಂತ್ರಣ ತಪ್ಪಿ ಮಕ್ಕಳಿಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮಕ್ಕಳಿಗೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಹಿರೇಕರೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತ ಮಕ್ಕಳು ಹಿರೇಕರೂರು ತಾಲೂಕಿನ ಆಪಿನಕೊಪ್ಪ ಗ್ರಾಮದ ನಿವಾಸಿಗಳಾಗಿದ್ದರು. ಅವರು ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇದನ್ನೂ ಓದಿ: ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಹೋಟೆಲ್‍ನಲ್ಲಿ ಊಟ, ತಿಂಡಿ ಸಪ್ಲೈಗೆ ಬಂತು ರೋಬೋ – ಮೈಸೂರಿನ ಜನತೆಯ ಮನಗೆದ್ದ ಸಪ್ಲೇಯರ್ ಲೇಡಿ