ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ (Tirupati Venkateswara Swamy) ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾರೆ.
ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (Bengaluru National Highway) ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

ಅಪಘಾತ ಸಂಭವಿಸಿದ್ದು ಹೇಗೆ?
ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಬೆಂಗಳೂರು ಮೂಲದ ದಂಪತಿಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

ಅಪಘಾತಕ್ಕೆ ಕಾರಣ ಏನು?
ಪ್ರಾಥಮಿಕ ಮೂಲಗಳ ಪ್ರಕಾರ, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ವಾಸವಿದ್ದ ಕುಟುಂಬ ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಟಿಕೆಟ್ ಪಡೆದುಕೊಂಡಿತ್ತು. ಆದ್ರೆ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದ ಬಳಿಕ ಬಸ್‌ನ ಹಿಂಭಾಗಕ್ಕೆ ಸಿಲುಕಿಕೊಂಡಿದ್ದ ಕಾರನ್ನು ಪೊಲೀಸರು ಜೆಸಿಬಿ ಮೂಲಕ ಹೊರತೆಗೆದಿದ್ದಾರೆ. ಇದನ್ನೂ ಓದಿ: ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

