ರಾಮನಗರ: ಮೈಸೂರು – ಬೆಂಗಳೂರು ದಶಪಥ ರಸ್ತೆಯಲ್ಲಿ (Bengaluru Mysuru Expressway) ಕಾರು (Car) ಹಾಗೂ ಟಿಪ್ಪರ್ ನಡುವೆ ಅಪಘಾತ (Accident) ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ.
ರಾಮನಗರ (Ramanagara) ಬೈಪಾಸ್ನ ಸಂಘಬಸವನದೊಡ್ಡಿ ಬಳಿ ದಶಪಥ ಹೆದ್ದಾರಿ ಮೇಲ್ಸೇತುವೆವೊಂದರಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕಾರು, ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗೆಯೇ ಟಿಪ್ಪರ್ ಮೇಲ್ಸೇತುವೆಗೆ ಒರಗಿ ನಿಂತಿದೆ. ಇದನ್ನೂ ಓದಿ: ನಾನು ಪೂಜಾರಿ ಅಷ್ಟೇ, ಜನ ಹೇಳಿದ್ದು ದೇವರಿಗೆ ತಲುಪಿಸುತ್ತೇನೆ: ಡಿಕೆಶಿ
Advertisement
Advertisement
ಸೇತುವೆ ಕೆಳಭಾಗದಲ್ಲಿ ಎಕ್ಸ್‌ಪ್ರೆಸ್ ಹೈವೇ ಇರುವುದರಿಂದ ಹೆಚ್ಚಿನ ವಾಹನ ಸಂಚಾರಿಸುತ್ತಿತ್ತು. ಏನಾದರು ಟಿಪ್ಪರ್ ಸೇತುವೆಯಿಂದ ಕೆಳಗೆ ಉರುಳಿದ್ದರೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟಾವಷತ್ ಭಾರಿ ಅನಾಹುತ ತಪ್ಪಿದಂತಾಗಿದೆ. ಕಳೆದ 8 ತಿಂಗಳಲ್ಲಿ ರಾಮನಗರ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಅಪಾಘತಗಳು ಸಂಭವಿಸಿ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದನ್ನೂ ಓದಿ: 25 ವರ್ಷಗಳಿಂದ ಸೋಲಿಲ್ಲದ ಸರದಾರ – ಕರಾವಳಿಯ ವಾಜಪೇಯಿ ಶ್ರೀನಿವಾಸ ಶೆಟ್ಟಿ