Connect with us

Davanagere

ಆಟೋ, ಕಾರ್ ಡಿಕ್ಕಿ- ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

Published

on

ದಾವಣಗೆರೆ: ಪ್ಯಾಸೆಂಜರ್ ಆಟೋ ಹಾಗೂ ಕಾರು ಡಿಕ್ಕಿಯಾಗಿ ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.

ಜಿಲ್ಲೆಯ ಹರಿಹರ ತಾಲೂಕಿನ ಬ್ಯಾಲದಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಚನ್ನಬಸಮ್ಮ (60), ಗದಿಗೇಶ್(40) ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಕುಂಬಳೂರಿನಿಂದ ಹರಿಹರದ ಕಡೆಗೆ ಬರುತ್ತಿದ್ದ ಆಟೋ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗದಿಗೇಶ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇತ್ತ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ವೃದ್ಧೆ ಕೊನೆಯುಸಿರೆಳೆದಿದ್ದಾರೆ.

ಭೀಕರ ಅಪಘಾತದಲ್ಲಿ ಮೂರು ಜನರಿಗೆ ಗಂಭೀರ ಗಾಯಗಳಾಗಿದ್ದು, ಹರಿಹರ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಿಹರ ಗ್ರಾಮಾಂತರ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಸಹ ದಾಖಲಿಸಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in