– ಅತಿ ವೇಗವಾಗಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ
ಬೆಂಗಳೂರು: ಕೋರಮಂಗಲ ಕಾರು ಅಪಘಾತ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಕಾರು ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷದಿಂದಾಗಿ ಬೈಕ್ ಸವಾರರಿಬ್ಬರು ಫ್ಲೈಓವರ್ ಮೇಲಿಂದ ಕೆಳಗಡೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ.
Advertisement
ಕಾರು ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದಾಗಿ ಬಲೆನೋ ಕಾರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಫ್ಲೈಓವರ್ ಸಿಂಗಸಂದ್ರ ಬಳಿ ಘಟನೆ ನಡೆದಿದೆ. ಕಾರ್ ಗುದ್ದಿದ ರಭಸಕ್ಕೆ ಬುಲೆಟ್ ಬೈಕ್ ನಲ್ಲಿದ್ದ ಯುವಕ, ಯುವತಿ ಇಬ್ಬರು ಸುಮಾರು 20 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರನ್ನು ಪ್ರೀತಮ್(30) ಮತ್ತು 28 ವರ್ಷದ ಯುವತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಟೆಕ್ಕಿ ಆಗಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ಭೀಕರ ಅಪಘಾತ
Advertisement
ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರೀತಮ್ ಹಾಗೂ ಯುವತಿ ಸ್ನೇಹಿತರಾಗಿದ್ದರು. ಸದ್ಯ ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಯುವತಿಯ ಕುಟುಂಬಸ್ಥರು ತಮಿಳುನಾಡಿನ ಚೆನ್ನೈನಿಂದ ಆಗಮಿಸುತ್ತಿದ್ದಾರೆ.
Advertisement
Advertisement
ಕಳೆದ ರಾತ್ರಿ ಸುಮಾರು 9:15 ರಿಂದ 9:20ರ ಸಮಯದಲ್ಲಿ ಎಲಿವೆಟೆಡ್ ಫ್ಲೈ ಓವರ್ ರಸ್ತೆಯಲ್ಲಿ ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬರುವ ಮಾರ್ಗದಲ್ಲಿ ಕಾರ್ ನಂ. ಕೆಎ-01 ಎಂಆರ್-2802ರ ಚಾಲಕ ನಿತೇಶ್ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡು, ಮುಂದೆ ಹೋಗುತ್ತಿದ್ದ ಬುಲೆಟ್ ಬೈಕ್ ನಂ. ಟಿಎನ್-01-ಬಿಡಿ-9218 ಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮತ್ತು ಹಿಂಬದಿ ಕುಳಿತಿದ್ದ ಯುವತಿ ಫ್ಲೈಓವರ್ ಮೇಲಿಂದ ಹಾರಿ ಕೆಳಗೆ ಬಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಫ್ಲೈಓವರ್ ಮೇಲಿಂದ ಸುಮಾರು ಮೀಟರ್ ದೂರದಲ್ಲಿ ಯುವಕ, ಯುವತಿಯ ಶವ ಬಿದ್ದಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತ ದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿ ಕಾರ್ ಚಾಲಕ ನಿತೇಶ್ ಹಾಗೂ ಪಕ್ಕದಲ್ಲಿದ್ದ ಇನ್ನೊಬ್ಬನಿಗೂ ಸಹ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಚಾಲಕ ಚೇತರಿಸಿಕೊಂಡ ಬಳಿಕ ಅಪಘಾತದ ಇನ್ನಷ್ಟು ಮಾಹಿತಿ ಹೊರಬರಬೇಕಿದೆ.
ಫ್ಲೈವರ್ ಮೇಲೆ ಅಪಘಾತವಾದಗ ಲೇ ಬೈ ಬಳಿ ತಡೆಗೋಡೆ ಸಂಪೂರ್ಣವಾಗಿ ಜಖಂಗೊಂಡಿದ್ದು, ತಡೆಗೋಡೆಯ ಮೇಲೆ ಅರ್ಧ ಕಾರು ನಿಂತಿದೆ. ಎಡಭಾಗದ ತಡೆಗೋಡೆ ಮೇಲೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿ ಬಿದ್ದಿದೆ. ಅತಿ ವೇಗವಾಗಿ ಬಂದ ಕಾರು ಮೊದಲು ಲೇ ಬೈ ಬಳಿ ಸುರಕ್ಷತೆಗೆ ಹಾಕಲಾಗಿದ್ದ ಬ್ಯಾರಿಕೇಡ್ ಗಳಿಗೆ ಡಿಕ್ಕಿ ಹೊಡೆದು, ಬಳಿಕ ಮುಂದೆ ಹೋಗುತ್ತಿದ್ದ ಬುಲೆಟ್ ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾರಂಭಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಫ್ಲೈಓವರ್ ಮೇಲೆ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಅಕ್ಕಪಕ್ಕದ ರಸ್ತೆಯಲ್ಲಿರುವ ಸಿಸಿಟಿವಿಗಳ ಪರಿಶೀಲನೆಗೆ ಮುಂದಾಗಿದ್ದಾರೆ. ತಮಿಳುನಾಡು ರಿಜಿಸ್ಟ್ರೇಷನ್ ಇರುವ ಬುಲೆಟ್ ಹಾಗೂ ಕರ್ನಾಟಕ ನೋಂದಣಿ ಹೊಂದಿರುವ ಕಾರು ಅಪಘಾತದಲ್ಲಿ ಸಂಪೂರ್ಣ ನುಜ್ಜುಗುಜ್ಜಾಗಿವೆ.