ಚಿತ್ರದುರ್ಗ: ಕಾರಿನಲ್ಲಿ (Car) ಆಕಸ್ಮಿಕವಾಗಿ ಬೆಂಕಿ (Fire) ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಯುವಕನೋರ್ವ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ನಡೆದಿದೆ.
ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ್ (35) ಮೃತ ದುರ್ದೈವಿ. ಸಿದ್ದೇಶ್ವರ್ ಟಾಟಾ ನೆಕ್ಸಾನ್ ಕಾರಿನಲ್ಲಿ ಹಿರಿಯೂರಿನಿಂದ ಅರಳೀಕಟ್ಟೆಗೆ ಮರಳುತ್ತಿದ್ದರು. ಈ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಇದನ್ನೂ ಓದಿ: ವಿಜಯಪುರ| SBI ಬ್ಯಾಂಕ್ ದರೋಡೆ – ಪಿಸ್ತೂಲ್ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ
ಬೆಂಕಿಯ ಕೆನ್ನಾಲಿಗೆ ಸಿಲುಕಿ ಕಾರಿನಲ್ಲಿದ್ದ ಸಿದ್ದೇಶ್ವರ್ ಸಂಪೂರ್ಣ ಸುಟ್ಟು ಹೋಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.