ನಡುರಾತ್ರಿ ಧಗಧಗಿಸಿತು ಮನೆ ಮುಂದೆ ನಿಲ್ಲಿಸಿದ್ದ ಕಾರು!

Public TV
0 Min Read
car fire collage copy

ಬೆಂಗಳೂರು: ಮನೆ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನ ಕೋಲ್ಸ್ ಪಾರ್ಕ್ ಬಳಿ ನಡೆದಿದೆ.

ಸಿದ್ದಾರ್ಥ್ ಎಂಬವರಿಗೆ ಸೇರಿದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಸಿದ್ದಾರ್ಥ್ ಅವರ ಹುಂಡೈ ಐ20 ಕಾರು ಬೆಂಕಿಗಾಹುತಿ ಆಗಿದೆ.

ಬೆಳಗ್ಗಿನ ಜಾವ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ ಎಂದು ಶಂಕಿಸಲಾಗುತ್ತಿದೆ. ಸದ್ಯ ಈ ವಿಷಯ ತಿಳಿದ ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಕಾರು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.

ಈ ಬಗ್ಗೆ ಭಾರತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *