ಬೆಂಗಳೂರು: ನಗರದ ಕೋರಮಂಗಲ (Koramangala) ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ (Fire In Car) ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾತ್ರಿ ಸುಮಾರು 11:30ರ ವೇಳೆಗೆ ಘಟನೆ ನಡೆದಿದೆ. ಕಾರು ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಒಳಗಿದ್ದವರು ತಕ್ಷಣ ಹೊರಗೆ ಬಂದಿದ್ದಾರೆ. ಬಳಿಕ ಸ್ಥಳದಲ್ಲಿದ್ದ ವಾಹನ ಸವಾರರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಇದನ್ನೂ ಓದಿ: ಎತ್ತಿನಭುಜ ಟ್ರೆಕ್ಕಿಂಗ್ ರೀ ಓಪನ್ – ರಸ್ತೆ ಮೇಲೆ ಬಿದ್ದ ರಾಶಿ ರಾಶಿ ಮರಗಳಿಂದ ಪ್ರವಾಸಿಗರ ಪರದಾಟ
ಘಟನೆಯಿಂದ ಆಗರ-ಸರ್ಜಾಪುರ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಇದನ್ನೂ ಓದಿ: ಆಟವಾಡುತ್ತಾ ಕೀ ಆನ್ ಮಾಡಿದ ಮಗು – ಟ್ರ್ಯಾಕ್ಟರ್ ಮೈಮೇಲೆ ಹರಿದು ತಂದೆ ದಾರುಣ ಸಾವು

