ಬೆಂಗಳೂರು: ಹೆದ್ದಾರಿಯಲ್ಲಿ ಕಾರೊಂದು ಧಗಧಗನೇ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲೂಕಿನ ಹೊಸೂರು (Hosur) ಮುಖ್ಯರಸ್ತೆ ನೆರಳೂರು ಗೇಟ್ ಬಳಿ ನಡೆದಿದೆ.
ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಕಾರು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೊಗೆ ಜೊತೆ ಬೆಂಕಿ ಕಿಡಿ ಕಾಣಿಸಿಕೊಂಡಿದೆ. ಈ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರು. ಇದನ್ನೂ ಓದಿ: ಸಾಗರ | ಕೆರೆ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ – 10 ಮಂದಿ ವಿದ್ಯಾರ್ಥಿಗಳಿಗೆ ಗಾಯ
ನೋಡನೋಡುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ಆವರಿಸಿದ್ದು, ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಪಡಿತರ ಸಾಗಾಟ; 9 ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ಕಿ ವಶಕ್ಕೆ
