ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬೈಕ್‌ಗೆ (Bike) ಅಪರಿಚಿತ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.
ಮೃತರು ಬೆಂಗಳೂರಿನ ಗಂಗೇನಹಳ್ಳಿಯ ರಾಜಶೇಖರ್ (45) ಹಾಗೂ ಶ್ರೀನಿವಾಸ್ (40) ಎಂದು ತಿಳಿದು ಬಂದಿದೆ. ಕೆಲಸ ಮುಗಿಸಿಕೊಂಡು ಸಂಜೆ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ಮಂಚನಬಲೆ ಬ್ರಿಡ್ಜ್ ಮೇಲೆ ಅಪಘಾತ ಸಂಭವಿಸಿದೆ. ಬೈಕ್ ಚಲಿಸುತ್ತಿದ್ದ ವೇಳೆ ಹಿಂಬದಿಯಿಂದ ಅತಿ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಭದ್ರತಾ ಸಿಬ್ಬಂದಿ, ನಕ್ಸಲರ ನಡುವೆ ಗುಂಡಿನ ಚಕಮಕಿ – ಇಬ್ಬರು ನಕ್ಸಲರ ಹತ್ಯೆ
- Advertisement3
ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿಟ್&ರನ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸ್ಥಳದಲ್ಲಿ ಮೃತರ ಕುಟುಂಬಸ್ಥರು ಕಣ್ಣೀರು ಹಾಕಿದ್ದು, ಘಟನೆಗೆ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಅಬ್ಬಬ್ಬಾ! ಬ್ಲೌಸ್‌ನಲ್ಲೂ ಚಿನ್ನ ಸಾಗಾಟ – ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ ಅಂದರ್
- Advertisement
Web Stories