ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು

Public TV
1 Min Read
Vijaypura Accident

ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಕನ್ನಾಳ ಕ್ರಾಸ್ (Kannal Cross) ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಮೃತರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24) ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ: ಪರಮೇಶ್ವರ್

ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದರು. ತಡರಾತ್ರಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತರ ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಮತ್ತೆ ಕೋಟಿ ಒಡೆಯನಾದ ಮಾದಪ್ಪ – 30 ದಿನಗಳಲ್ಲಿ 2.29 ಕೋಟಿ ಕಾಣಿಕೆ ಸಂಗ್ರಹ

Share This Article